ಅಪ್ರಾಪ್ತೆ ಮೇಲೆ ಅತ್ಯಾಚಾರ – ಕಾಮುಕನಿಗೆ ಜೀವಾವಧಿ ಶಿಕ್ಷೆ
ಚೆನ್ನೈ : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಕಾಮುಕನಿಗೆ ವಿಸೇಷ ನ್ಯಾಯಾಯವು ಪೋಕ್ಸೋ ಕಾಯ್ದೆಯಡಿ ಜೀವಾವಧಿ ಶಿಕ್ಷೆ ವಿಧಿಸಿದೆ. ತಮಿಳುನಾಡಿನ ಪುಲಿಯಂತೋಪಿನಲ್ಲಿ 2018 ರಲ್ಲಿ ಈ ಘಟನೆ ಬೆಳಕಿಗೆ ಬಮದಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ಬಳಿಕ ವಿಶೇಷ ನ್ಯಾಯಾಲಯವು ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
ಅಪರಾಧ ನಡೆದಾಗ ಆರೋಪಿಗೆ 26 ವರ್ಷ ವಯಸ್ಸಾಗಿತ್ತು. ಆರೋಪಿಯನ್ನ ಜಲಾಲುದ್ದೀನ್ ಎಂದು ಗುರುತಿಸಲಾಗಿದೆ. ಈತ ಸಂತ್ರಸ್ತೆಯ ತಾಯಿಗೆ ಪರಿಚಿತನಬಾಗಿದ್ದ ಆಗಗ ಆಕೆಯನ್ನ ಭೇಟಿ ಮಾಡ್ತಿದ್ದ. ಇದೇ ಸಂದರ್ಭದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ. ಈ ಸಂಬಂಧ ಸಂತ್ರಸ್ತೆಯ ತಾಯಿ ದೂರು ದಾಖಲಿಸಿದ ನಂತರ ಪೊಲೀಸರು ಆರೋಪಿಯನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ನ್ಯಾಯಾಲಯವು ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿದೆ. ಜೊತೆಗೆ 10,000 ದಂಡವನ್ನು ವಿಧಿಸಿದೆ.








