ಉತ್ತರಪ್ರದೇಶ : 7 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ
ಉತ್ತರಪ್ರದೇಶ : ಉತ್ತರಪ್ರದೇಶ ಅಪರಾಧಗಳ ಆಗರವಾಗಿದೆ ಎನ್ನುವುದಕ್ಕೆ ಮತ್ತೊಂದು ಉದಾಹರಣೆ ಸಿಕ್ಕಿದೆ.. 7 ವರ್ಷದ ಬಾಲಕಿಯನ್ನು ಅಪಹರಿಸಿ ಕಿಡಿಗೇಡಿ, ಅತ್ಯಾಚಾರ ಮಾಡಿ ಹತ್ಯೆಗೈದಿದ್ದು , ಪೊಲೀಸರು ಆತನಿಗಾಗಿ ಹುಡುಕಾಟ ನಡೆಸ್ತಾಯಿದ್ದಾರೆ.. ಉತ್ತರ ಪ್ರದೇಶದ ಮೊರಾದಬಾದ್ ಗ್ರಾಮದಲ್ಲಿ ಇಂತಹ ಹೇಯ ಕೃತ್ಯ ನಡೆದಿದೆ.
ಡಿಸೆಂಬರ್ 22 ರಂದು ಮನೆಯ ಮುಂದೆ ಆಟವಾಡುತ್ತಿದ್ದಾಗ ಬಾಲಕಿ ಕಾಣೆಯಾಗಿದ್ದಾಳೆ. ಈ ಸಂಬಂಧ ಕುಟುಂಬಸ್ಥರು ದೂರು ದಾಖಲಿಸಿದ ಮೇರೆಗೆ ಎರಡು ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿತ್ತು. ಆದರೆ ಬಾಲಕಿಯ ಯಾವುದೇ ಸುಳಿವು ಎರಡು ತಂಡಕ್ಕೆ ಸಿಕ್ಕಿರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಘಟನೆ ನಡೆದ 2 ದಿನದ ಬಳಿಕ ರೈತರೊಬ್ಬರು ತಮ್ಮ ಕಬ್ಬಿನ ಗದ್ದೆಗೆ ಹೋದಂತಹ ಸಂದರ್ಭದಲ್ಲಿ ಕೊಳೆತ ಶವದ ವಾಸನೆ ಬಂದಿದೆ. ಬಳಿಕ ಪೊಲೀಸರಿಗೆ ಶವ ಪತ್ತೆಯಾಗಿರುವ ಮಾಹಿತಿಯನ್ನು ನೀಡಿದ್ದಾರೆ.
ಮರಣೋತ್ತರ ಪರೀಕ್ಷೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರವುದು ದೃಢಪಟ್ಟಿದೆ. ಈ ಸಂಬಂಧ ಆರೋಪಿಯ ಹುಡುಕಾಟ ನಡೆಯುತ್ತಿದೆ ಹಾಗೂ ಅಪರಿಚಿತ ಆರೋಪಿಯ ವಿರುದ್ಧ ಪೋಕ್ಸೊ ಕಾಯ್ದೆಯಡಿ FIR ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.








