ಕೆಲಸಕೊಡಿಸುವ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ – ವಿಡಿಯೋ ಮಾಡಿ ಬ್ಲಾಕ್ ಮೇಲ್
ಉತ್ತರಪ್ರದೇಶ : ಅಪರಾಧಗಳ ಆಗರ ಉತ್ತರಪ್ರದೇಶದಲ್ಲಿ ಮತ್ತೊಂದು ಹೇಯ ಘಟನೆ ನಡೆದಿದೆ. ಮಹಿಳೆಗೆ ಕೆಲಸಕೊಡಿಸುವ ನೆಪದಲ್ಲಿ ಆಕೆಯ ಮೇಲೆ ಕಾಮುಕನೋರ್ವ ಅತ್ಯಾಚಾರವೆಸಗಿ, ಬಳಿಕ ಆಕೆಯ ಅಶ್ಲೀಲ ವಿಡಿಯೋ ಮಾಡಿ ಬ್ಲ್ಯಾಕ್ ಮೇಲ್ ಮಾಡಿದ್ದಾನೆ. ಉತ್ತರಪ್ರದೇಶದ ಮೀರತ್ ನ ಖಾರ್ಖೋಡಾ ಪ್ರದೇಶದಲ್ಲಿ ನಡೆದಿದೆ.
ಇನ್ನೂ ಶಾಕಿಂಗ್ ವಿಚಾರ ಅಂದ್ರೆ ಮಹಿಳೆ ತನಗಾದ ಅನ್ಯಾಯದ ವಿರುದ್ಧ ದೂರು ದಾಖಲಿಸಲು ಹೋದ ಸಂದರ್ಭದಲ್ಲಿ ಪೊಲೀಸರು ದೂರು ಸ್ವೀಕರಿಸುವ ಬದಲು ಮಹಿಳೆಗೆ ಬೆದರಿಸಿ ಕಳುಹಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಮಹಿಳೆ ಮುಖ್ಯಮಂತ್ರಿಗಳ ಪೋರ್ಟಲ್ ನಲ್ಲಿ ದೂರು ದಾಖಲಿಸಿದ್ದಾರೆ ಎನ್ನಲಾಗಿದೆ.
ಕೆಲಸಕೊಡಿಸುವ ನೆಪದಲ್ಲಿ ಆಕೆಯನ್ನ ಹೋಟೆಲ್ ಗೆ ಕರೆದೊಯ್ದು ತಂಪುಪಾನೀಯದಲ್ಲಿ ನಿದ್ರೆ ಮಾತ್ರೆ ನೀಡಿ ಆಕೆಯ ಅತ್ಯಾಚಾರವೆಸಗಿದ್ದಾನೆ. ಬಳಿಕ ಅಶ್ಲೀಲ ವಿಡಿಯೋ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುತ್ತಾ ಧಮ್ಕಿ ಹಾಕುತ್ತಿದ್ದ ಎನ್ನಲಾಗಿದೆ.