Crime : ಅಪ್ರಾಪ್ತ ಬಾಲಕನ ಮೇಲೆ ಮಹಿಳೆಯಿಂದ ಅತ್ಯಾಚಾರ…
ಅಪ್ರಾಪ್ತ ಬಾಲಕನ ಮೇಲೆ ಮಹಿಳೆಯೊಬ್ಬಳು ಲೈಂಗಿಕ ಕಿರುಕುಳ ಕೊಟ್ಟಿರುವಂತಹ ಆಘಾತಕಾರಿ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ..
ಥಾಣೆಯಲ್ಲಿ 16 ವರ್ಷದ ಬಾಲಕನ ಮೇಲೆ ಮಹಿಳೆಯೊಬ್ಬಳು ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿದ್ದಾಳೆ..
32 ವರ್ಷದ ಮಹಿಳೆ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ..
ಆರೋಪಿ ಮಹಿಳೆಗೆ ಮೂವರು ಮಕ್ಕಳಿದ್ದು, ನಾಸಿಕ್ ನಲ್ಲಿರುವ ತಮ್ಮ ಸಂಬಂಧಿಕರ ನೆರೆಹೊರೆಯಲ್ಲಿ ವಾಸಿಸುತ್ತಿದ್ದರು ಎಂದು ಬಾಲಕನ ತಾಯಿ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.
ಆರೋಪಿ ಮಹಿಳೆ ಆಗಾಗ ಮುಂಬೈಗೆ ಬಂದು ಬಾಲಕನೊಂದಿಗೆ ಸ್ನೇಹ ಬೆಳೆಸುತ್ತಿದ್ದಳು. ಆಕೆ ಆತನಿಗೆ ಮದ್ಯ ಸೇವಿಸುವಂತೆ ಮಾಡಿ ಆತನೊಂದಿಗೆ ಲೈಂಗಿಕ ಸಂಬಂಧ ಹೊಂದುತ್ತಿದ್ದಳು ಎಂದು ಥಾಣೆಯ ಕಲ್ಯಾಣ್ ನಲ್ಲಿರುವ ಕೋಲ್ಸೆವಾಡಿ ಪೊಲೀಸ್ ಠಾಣೆಯ ಅಧಿಕಾರಿ ದೂರನ್ನು ಉಲ್ಲೇಖಿಸಿ ತಿಳಿಸಿದ್ದಾರೆ.
ಬಾಲಕನು ಶಾಲೆಯನ್ನು ಬಿಟ್ಟು ನಾಸಿಕ್ ಗೆ ಮಹಿಳೆಯನ್ನು ಭೇಟಿಯಾಗಲು ಹೋಗುತ್ತಿದ್ದನು ಎನ್ನಲಾಗಿದೆ.
ಆಕೆ ಆತನಿಗೆ ಆಕ್ಷೇಪಾರ್ಹ ವಿಡಿಯೋಗಳನ್ನು ತೋರಿಸುತ್ತಿದ್ದಳು. ಇದು 2019 ರಿಂದ 2022ರ ಡಿಸೆಂಬರ್ ವರೆಗೆ ಮುಂದುವರೆದಿದೆ. ನಂತರ ಹುಡುಗನ ತಾಯಿ ಈ ಬಗ್ಗೆ ತಿಳಿದುಕೊಂಡು ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮಹಿಳೆ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ ಮತ್ತು ಬಾಲಾಪರಾಧ ನ್ಯಾಯ ಕಾಯ್ದೆಯ ಅಡಿಯಲ್ಲಿ ಪ್ರಕರಣಗಳನ್ನ ದಾಖಲು ಮಾಡಲಾಗಿದೆ…
Crime , women sexually harassed a minor boy ( 16 year old boy )








