ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮರಗಳ ಮೇಲೆ ಪಿನ್/ಮೊಳೆ ಹೊಡೆಯುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಬಿಬಿಎಂಪಿ ನಿರ್ಧರಿಸಿದೆ.
ಶಿವಾನಂದ ವೃತ್ತದ ಚಿತ್ರಕಲಾ ಪರಿಷತ್ ಬಳಿಯ ಬಸ್ ನಿಲ್ದಾಣ ಬಳಿ ಬಿ.ಪ್ಯಾಕ್ ಸಂಸ್ಥೆ ವತಿಯಿಂದ ಹಮ್ಮಿಕೊಂಡಿರುವ “ಮೊಳೆ ಮುಕ್ತ ಮರ ಬೆಂಗಳೂರು ಅಭಿಯಾನ”ಕ್ಕೆ ಚಾಲನೆ ನೀಡಿದ ಬಿಬಿಎಂಪಿ ಆಯುಕ್ತ ಆಯುಕ್ತ ಮಂಜುನಾಥ್ ಪ್ರಸಾದ್, ಮರಗಳ ಮೇಲೆ ಬಿತ್ತಿಪತ್ರಗಳನ್ನು ಅಂಟಿಸುವುದು, ಮೊಳೆ ಹೊಡೆಯುವುದನ್ನು ಮಾಡಿದರೆ ಕ್ರಿಮಿನಲ್ ಕೇಸ್ ಹಾಕಲಾಗುವುದು ಎಂದರು.

ಮರಗಳು ಕೂಡ ಮನುಷ್ಯರು ಇದ್ದ ಹಾಗೆ. ಮನುಷ್ಯರಿಗೆ ನೋವಾದ ಹಾಗೆಯೇ ಮರಗಳಿಗೂ ಕೂಡಾ ನೋವಾಗುತ್ತದೆ. ಮರಕ್ಕೆ ಮೊಳೆ, ಕೇಬಲ್, ತಂತಿಗಳನ್ನು ಸುತ್ತಿದರೆ ಗಾಯವಾಗಿ ಸರಿಯಾಗಿ ಆಹಾರ, ನೀರು, ಪೌಷ್ಟಿಕಾಂಶ ಸಿಗದೆ ಮರಗಳು ಸಾವನ್ನಪ್ಪಲಿವೆ. ನಿಷೇಧ ಇದ್ದರೂ ಸಹ ಬೆಂಗಳೂರು ನಗರದಲ್ಲಿ ಮರಗಳ ಮೇಲೆ ಬಿತ್ತಿಪತ್ರಗಳನ್ನು ಅಂಟಿಸುತ್ತಿದ್ದಾರೆ. ಅಂತವರ ಮೇಲೆ ಕ್ರಿಮಿನಲ್ ಕೇಸ್ ಹಾಕಲು ಕ್ರಮಕೈಗೊಳ್ಳಲಾಗುತ್ತಿದೆ. ಜೊತೆಗೆ ಮರಗಳಿಗೆ ಹಾನಿ ಮಾಡುವ, ಮೊಳೆ/ಸ್ಟ್ಯಾಪ್ಲರ್ ನಲ್ಲಿ ಪಿನ್ ಹೊಡೆಯುವ ಸಂಬಂಧ ಕಾನೂನಿನಲ್ಲಿ ತಿದ್ದುಪಡಿ ತಂದು ಶಿಕ್ಷಾರ್ಹ ಅಪರಾಧವನ್ನಾಗಿ ಮಾಡಿದರೆ ಈ ರೀತಿಯ ಸಮಸ್ಯೆ ಬಗೆಹರಿಯಲಿದೆ ಎಂದರು.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ಸಂಸ್ಥೆ ಬಳಿ ಮರಗಳನ್ನು ಸ್ಥಳಾಂತರ ಮಾಡುವ ದೊಡ್ಡ ಯಂತ್ರಗಳಿವೆ. ಅವರು ನಗರದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವ ಸ್ಥಳದಲ್ಲಿ ದೊಡ್ಡ ದೊಡ್ಡ ಮರಗಳಿದ್ದರೆ ಅದನ್ನು ಉಚಿತವಾಗಿ ಬೇರೆಡೆ ಸ್ಥಳಾಂತರ ಮಾಡಲು ಒಪ್ಪಿದ್ದಾರೆ. ಅವರ ಸೇವೆಯನ್ನು ಬಳಸಿಕೊಂಡು ಮರಗಳನ್ನು ಕಡಿಯದೆ ಎಲ್ಲೆಲ್ಲಿ ಸಾಧ್ಯವಾಗುತ್ತದೆಯೋ ಅಲ್ಲೆಲ್ಲಾ ಮರಗಳ ಸ್ಥಳಾಂತರ ಮಾಡಲು ಕ್ರಮವಹಿಸಲಾಗುವುದು ಮಂಜುನಾಥ್ ಪ್ರಸಾದ್ ಹೇಳಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








