ಕೋಲಾರ : ಗಾಂಜಾ (ganja) ಮತ್ತಿನಲ್ಲಿ ಮೂವರು ಯುವಕರು ದುಷ್ಕೃತ್ಯ ನಡೆಸಿರುವ ಘಟನೆ ನಡೆದಿದೆ.
ಇದನ್ನು ಪ್ರಶ್ನಿಸಿದ ಗ್ರಾಮಸ್ಥರ ಮೇಲೆ ಹಲ್ಲೆ ನಡೆಸಿದ್ದಲ್ಲದೇ, ವ್ಯಕ್ತಿ ಕೈ ಕಚ್ಚಿ ಗಾಯಗೊಳಿಸಿದ್ದಾರೆ. ಕೋಲಾರ ತಾಲೂಕಿನ ಕೊಂಡರಾಜನಹಳ್ಳಿಯಲ್ಲಿ ಈ ಘಟನೆ ನಡೆದಿದೆ.
ಕೊಂಡರಾಜನಹಳ್ಳಿ ನಿವಾಸಿ ನಾಗರಾಜ್ ಕೈ ಬೆರಳಿಗೆ ಗಂಭೀರ ಗಾಯವಾಗಿದ್ದು, ಆರೋಪಿಗಲನ್ನು ಗ್ರಾಮಸ್ಥರು ಪೊಲೀಸರಿಗೆ ಒಪ್ಪಿಸಿದ್ದಾರೆ. ಸ್ಥಳಕ್ಕೆ ಆಗಮಿಸಿರುವ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು, ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಮತ್ತೋರ್ವ ಪರಾರಿಯಾಗಿದ್ದು, ಆತನಿಗಾಗಿ ಬಲೆ ಬೀಸಿದ್ದಾರೆ.