ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳಿಬ್ಬರು ಕೊಲೆ ಮಾಡಿದ್ದಲ್ಲದೇ, ದೇಹವನ್ನು ಎಳೆಯೊಯ್ದಿರುವ ಘಟನೆ ನಡೆದಿದೆ.
ಈ ಘಟನೆ ನೋಯ್ಡಾದಲ್ಲಿ ನಡೆದಿದೆ. ಹಳೆಯ ವೈಷಮ್ಯದಿಂದ ಈ ಕೊಲೆ ನಡೆದಿದೆ ಎನ್ನಲಾಗಿದ್ದು, ಬೈಕ್ ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದು, ನಂತರ ದೇಹವನ್ನು ಬೈಕ್ಗೆ ಕಟ್ಟಿ ಕಿಲೋಮೀಟರ್ಗಳವರೆಗೆ ಎಳೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.
ನೋಯ್ಡಾದ ಬರೋಲಾದಲ್ಲಿ ಅನುಜ್ ಹಾಗೂ ಅವರ ಸೋದರ ಸಂಬಂಧಿ ನಿತಿನ್ ಎಂಬ ಇಬ್ಬರು ಮೆಹಂದಿ ಹಾಸನ್ಗೆ ಚಾಕುವಿನಿಂದ ಇರಿದಿದ್ದಾರೆ. ನಂತರ ಕಾಲನ್ನು ಬೈಕ್ಗೆ ಕಟ್ಟಿಕೊಂಡು ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ. ಕೆಲವು ವರ್ಷಗಳ ಹಿಂದೆ ಮೆಹೆಂದಿ ಹಸನ್ ಅನುಜ್ ತಂದೆಯ ಮೇಲೆ ಹಲ್ಲೆ ನಡೆಸಿದ್ದ ಎನ್ನಲಾಗಿದ್ದು, ದ್ವೇಷದಿಂದ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
ಕೂಡಲೇ ಮೆಹಂದಿ ಹಸನ್ ಅವರು ಆಸ್ಪತ್ರೆಗೆ ದಾಖಲಿಸಲಾಗಿದತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಆರೋಪಿಗಳನ್ನು ವಶಕ್ಕೆ ಪಡೆಯಲು ಹೋದಾಗ ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಗುಂಡಿನ ಚಕಮಕಿ ನಡೆದಿದೆ ಎನ್ನಲಾಗಿದೆ.








