ನದಿಯಿಂದ ನಗರಕ್ಕೆ ಬಂದ ಮೊಸಳೆ
ಉತ್ತರ ಕನ್ನಡ : ದಾಂಡೇಲಿಯ ಬಸ್ ಡಿಪೋ ಸಮೀಪದ ಸುಮಾರು ಆರು ಅಡಿ ಉದ್ದದ ಮೊಸಳೆ ಕಾಣಿಸಿಕೊಂಡು ಕೆಲ ಕಾಲ ಆತಂಕಕ್ಕೆ ಕಾರಣವಾಗಿತ್ತು.
ರಸ್ತೆ ಪಕ್ಕದಲ್ಲಿ ಮೊಸಳೆ ಕಾಣಿಸುತ್ತಿದ್ದಂತೆ, ಸ್ಥಳೀಯರು ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.
ಕೂಡಲೇ ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಟ್ಟು ಮೊಸಳೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ..
ಅಂದಹಾಗೆ ಕೆಲ ತಿಂಗಳ ಹಿಂದೆ ಪಟೇಲ್ ನಗರದ ವ್ಯಾಪ್ತಿಯಲ್ಲಿ ಯುವಕನ ಮೇಲೆ ಮೊಸಳೆ ದಾಳಿ ನಡೆಸಿತ್ತು.
ಇದೀಗ ಅದೇ ಸ್ಥಳದಲ್ಲಿ ಮೊಸಳೆ ಕಾಣಿಸಿಕೊಂಡಿದೆ. ಇದು ಜನರ ಆತಂಕಕ್ಕೆ ಕಾರಣವಾಗಿದೆ.
ಸೆರೆಹಿಡಿದ ಮೊಸಳೆಯನ್ನು ಅರಣ್ಯ ಇಲಾಖೆ ತನ್ನ ಹತ್ತಿರ ಇಟ್ಟುಕೊಂಡಿದ್ದು, ಮೊಸಳೆಯನ್ನು ಬೇರಕಡೆ ಸ್ಥಳಾಂತರಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. Crocodile arrives in the city from the river in dhandeli









