crocodile ಮೊಸಳೆ ಬಂತು ಮೊಸಳೆ : ಬೆಚ್ಚಿಬಿದ್ದ ಜನರು
ಶಿರಸಿ : ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕೊಗಿಲಬನ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಮೊಸಳೆ ಪ್ರತ್ಯಕ್ಷವಾಗಿದೆ.
ಕಾಳಿ ನದಿಯಿಂದ ಆಹಾರ ಅರಸಿ ನದಿ ದಡಕ್ಕೆ ಬಂದ ಬೃಹದಾಕಾರದ ಮೊಸಳೆಯು ನದಿ ಪಕ್ಕದಲ್ಲೇ ಇರುವ ಕೊಗಿಲಬನ ಗ್ರಾಮಕ್ಕೆ ನುಗ್ಗಿದೆ.
ಬೆಳಂಬೆಳಗ್ಗೆ ಗ್ರಾಮದಲ್ಲಿ ಓಡಾಡಿದ ಮೊಸಳೆಯನ್ನು ನೋಡಿದ ಗ್ರಾಮದ ಜನರು ಬೆಚ್ಚಿ ಬಿದ್ದಿದ್ದು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಆದರೆ ಗ್ರಾಮಕ್ಕೆ ಅರಣ್ಯಾಧಿಕಾರಿಗಳು ಬರುವುದರೊಳಗೆ ಮೊಸಳೆ ಗ್ರಾಮವನ್ನು ದಾಟಿ ಕಾಡಿನ ಹಾದಿ ಮೂಲಕ ಮತ್ತೆ ನದಿಗೆ ಸೇರಿಕೊಂಡಿದೆ.
ಇನ್ನು ದಾಂಡೇಲಿಯ ಕಾಳಿ ನದಿಯಲ್ಲಿ ಸಾವಿರಾರು ಮೊಸಳೆಗಳು ವಾಸವಾಗಿವೆ.
ಆದರೆ ಇದೇ ಮೊದಲ ಬಾರಿ ಮೊಸಳೆ ನದಿಯನ್ನು ಬಿಟ್ಟು ಗ್ರಾಮಕ್ಕೆ ಆಗಮಿಸಿದ್ದು ಜನರನ್ನು ಬೆಚ್ಚಿ ಬೀಳಿಸಿದೆ.










