KRS ಬೃಂದಾವನದಲ್ಲಿ ಮೊಸಳೆ ಪ್ರತ್ಯಕ್ಷ
ಮಂಡ್ಯ : KRS ಬೃಂದಾವನದಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ.
ಬೃಂದಾವನದ ಬೋಟಿಂಗ್ ಪಾಯಿಂಟ್ ನಲ್ಲಿ ಮೊಸಳೆ ಕಾಣಿಸಿಕೊಂಡಿದೆ. ಇದರಿಂದ ಪ್ರವಾಸಿಗರಲ್ಲಿ ಆತಂಕ ಮನೆ ಮಾಡಿದೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ KRS ಬೃಂದಾವನ ಬೋಟಿಂಗ್ ಪಾಯಿಂಟ್ ನಲ್ಲಿ ಮೊಸಳೆ ಕಾಣಿಸಿಕೊಂಡಿದೆ.
ಡ್ಯಾಂನಿಂದ ಹೆಚ್ಚುವರಿ ನೀರು ಬಿಟ್ಪಿರೋದ್ರಿಂದ ಬೋಟಿಂಗ್ ಪಾಯಿಂಟ್ ಜಲಾವೃತವಾಗಿದೆ.

ಇನ್ನು ಮೊಸಳೆ ಪ್ರತ್ಯಕ್ಷವಾಗಿರುವುದರಿಂದ ಪ್ರವಾಸಿಗರಲ್ಲಿ ಆತಂಕ ಮನೆ ಮಾಡಿದ್ದು, ಇಂದು ಮೊಸಳೆ ಸೆರೆ ಹಿಡಿಯುವ ಕಾರ್ಯಾಚರಣೆ ನಡೆಯಲಿದೆ.
ಇನ್ನು ಕೆಆರ್ ಎಸ್ ಜಲಾನಯದಲ್ಲಿ ಭಾರಿ ಮಳೆಯಾಗುತ್ತಿದ್ದು, ಕೆಆರ್ ಎಸ್ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದೆ.
ಹೀಗಾಗಿ ಡ್ಯಾಂನಿಂದ ಸಾಕಷ್ಟು ಪ್ರಮಾಣದಲ್ಲಿ ನೀರನ್ನು ಹೊರ ಹರಿಸಲಾಗುತ್ತಿದೆ.
ಇದರಿಂದ ನದಿ ಪಾತ್ರದ ಜನರಲ್ಲಿ ಆತಂಕ ಮನೆ ಮಾಡಿದೆ.