ಕಾಡಾನೆಗಳ ದಾಳಿಯಿಂದ ಬೆಳೆ ನಾಶ | ಕಂಗಾಲಾದ ರೈತ
ಮೈಸೂರು: ಕಾಡಾನೆಗಳ ದಾಳಿಗೆ ಬೇಸತ್ತು, ಮದುವಿನಹಳ್ಳಿ ಗ್ರಾಮದ ರೈತರು ಅರಣ್ಯ ಇಲಾಖೆ ಎದರು ವಿಷದ ಬಾಟಲಿ ಹಿಡಿದು ಪ್ರತಿಭಟನೆ ಮಾಡುತ್ತಿದ್ದಾರೆ.
ಕಾಡಂಚಿನ ಗ್ರಾಮಗಳಲ್ಲಿ ತೋಟಗಳಿಗೆ ಕಾಡಾನೆಗಳು ದಾಳಿ ಮಾಡುತ್ತಿವೆ. ಇದರಿಂದ ರೈತ ಕಷ್ಟಪಟ್ಟು ಬೆಳೆದ ಬೆಳೆಗಳು ನಾಶವಾಗಿವೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಕಳೆದ ಮೂರು ದಿನಗಳಿಂದ ಕಾಡಾನೆಗಳು ದಾಳಿ ಮಾಡುತ್ತಿದ್ದು, ಇದನ್ನು ಅರಣ್ಯ ಇಲಾಖೆ ಸಿಬ್ಬಂದಿ ಅವರ ಗಮನಕ್ಕೆ ತಂದರು ಪ್ರಯೋಜನವಾಗುತ್ತಿಲ್ಲ.
ಇನ್ನೂ ಕಾಡಾನೆ ದಾಳಿಯನ್ನು ತೆಡಯಲು ಹಾಕಿದ್ದ ಕಬ್ಬಿಣದ ತಡೆಗೋಡೆ ಮುರಿದಿದೆ. ಹೀಗಾಗಿ ಆನೆಗಳು ಸುಲಭವಾಗಿ ರೈತರ ಜಮೀನುಗಳಿಗೆ ನುಗ್ಗುತ್ತಿವೆ. ಕಾಡಾನೆ ಹಾವಳಿ ನಿಯಂತ್ರಿಸದ ಅರಣ್ಯ ಸಿಬ್ಬಂದಿ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದು, ಕಾಡಾನೆ ಹಾವಳಿ ನಿಯಂತ್ರಿಸುವಂತೆ ಆಗ್ರಹಿಸಿ ಬಾಟಲಿ ಹಿಡಿದು ರೈತರು ಪ್ರತಿಭಟನೆ ಮಾಡುತ್ತಿದ್ದಾರೆ.
ಇನ್ನೂ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಪೆಂಜಳ್ಳಿ ಗ್ರಾಮದ ಬಳಿ ರಸ್ತೆಗಳಲ್ಲಿ 2 ಕಾಡಾನೆಗಳ ಓಡಾಟ ಕಂಡು ಬಂದಿದೆ. ಕಾಡಾನೆಗಳನ್ನು ನೋಡಲು ನೂರಾರು ಜನ ಜಮಾಯಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆನೆಗಳನ್ನು ಮರಳಿ ಕಾಡಿಗೆ ಓಡಿಸುವಲ್ಲಿ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.