ಬೆಂಗಳೂರು: ಟಿಕೆಟ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ಚೈತ್ರಾ ಹಾಗೂ ಶ್ರೀಕಾಂತ್ ಗೆ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಉದ್ಯಮಿ ಗೋವಿಂದಬಾಬು ಪೂಜಾರಿಗೆ ಕೋಟ್ಯಾಂತರ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಆರೋಪಿ ಚೈತ್ರಾ ಹಾಗೂ ಎರಡನೇ ಆರೋಪಿ ಶ್ರೀಕಾಂತ್ ಗೆ ಮೂರನೇ ಎಸಿಎಂಎಂ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ವಂಚಿಸಿರುವ ಆರೋಪದ ಹಿನ್ನೆಲೆಯಲ್ಲಿ ಚೈತ್ರಾಳನ್ನು ಪೊಲೀಸರು ಬಂಧಿಸಿದ್ದರು. ಆನಂತರ ತನಿಖೆ ಕೈಗೊಂಡು ಅವರ ಟೀಂ ಬಂಧಿಸಲಾಗಿತ್ತು. ಹೀಗಾಗಿ ನಾಳೆ ಚೈತ್ರಾ ಜೈಲಿನಿಂದ ಹೊರಗೆ ಬರಲಿದ್ದಾರೆ.