ಮಳವಳ್ಳಿ: ರಸ್ತೆಯಲ್ಲಿ ಹೋಗುವಾಗ ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ಬೈಕ್ ನಿಯಂತ್ರಣ ತಪ್ಪಿದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ತಾಲೂಕಿನ ದಬ್ಬಹಳ್ಳಿ ಎಂಬಲ್ಲಿ ನಡೆದಿದ್ದು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ ಎನ್ನಲಾಗಿದೆ. ನೆಟ್ಕಲ್ ಗ್ರಾಮದ ವಸಂತ್ ಕುಮಾರ್ (40) ಸಾವನ್ನಪ್ಪಿದ ದುರ್ದೈವಿ. ಬೈಕ್ ಸಾವರ ಸಂಬಂಧಿಕರೊಬ್ಬರ ಅಂತ್ಯಕ್ರಿಯೆ ಮುಗಿಸಿ ಮರಳಿ ಗ್ರಾಮಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ದಬ್ಬಹಳ್ಳಿ ಹತ್ತಿರ ಬೈಕ್ ಗೆ ನಾಯಿ ಅಡ್ಡ ಬಂದಿದೆ. ಇದರಿಂದ ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ವಸಂತ್ ಕುಮಾರ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಹಿಂಬದಿ ಸವಾರ ಮಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.








