ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಗಗನಕ್ಕೇರಿದ ಕಚ್ಚಾ ತೈಲ ಬೆಲೆ
ಲಂಡನ್ : ಈಗಾಗಲೇ ತೈಲ ಬೆಲೆ ಏರಿಕೆಯಿಂದಾಗಿ ಕಂಗಾಲಾಗಿರುವ ಜನರಿಗೆ ಮತ್ತೊಂದು ಶಾಕ್ ಕಾದಿದೆ.
ವಿಶ್ವದ ಅತಿದೊಡ್ಡ ತೈಲ ಕಂಪನಿ ಸೌದಿ ಅರಾಮ್ಕೋ ತೈಲ ಘಟಕದ ಮೇಲೆ ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆಸಿದ್ದು, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ ಆಗುತ್ತಿದೆ.
ಭಾನುವಾರ ಸೌದಿ ಅರಾಮ್ಕೊದ ಘಟಕದ ಮೇಲೆ ಇರಾನ್ ಬೆಂಬಲಿತ ಯೆಮೆನ್ನ ಹೌತಿ ಪಡೆಗಳು ದಾಳಿ ನಡೆಸಿದೆ.
ಪರಿಣಾಮ ಸೋಮವಾರ ಒಂದು ಬ್ಯಾರೆಲ್ ಕಚ್ಚಾ ತೈಲದ ಬೆಲೆ 70 ಡಾಲರ್ ಆಗಿತ್ತು. ಇಂದು ಈ ಬೆಲೆ 71 ಡಾಲರ್ಗೆ ಏರಿಕೆ ಆಗಿದೆ.
ಇದು ಮುಂದುವರಿಯುವ ಸಾಧ್ಯತೆಗಳಿದ್ದು, ಮುಂದಿನ ದಿನಗಳಲ್ಲಿ ಕಚ್ಚಾ ತೈಲದ ಬೆಲೆ ಮತ್ತಷ್ಟು ಏರಿಕೆಯಾಗಬಹುದು ಎಂದು ಹೇಳಲಾಗುತ್ತಿದೆ.
ಇದು ಒಂದು ಕಡೆಯಾದ್ರೆ ದೇಶದಲ್ಲಿ ಈಗಾಗಲೇ ತೈಲ ಬೆಲೆ ದಾಖಲೆ ಪ್ರಮಾಣವನ್ನ ಮುಟ್ಟಿದೆ. ಇನ್ನೇನು ಕೆಲವೇ ದಿನಗಳಲ್ಲಿ 100ರ ಗಡಿದಾಟಲಿದೆ.
ಇದರಿಂದ ದೇಶ ವಾಸಿಗಳು ಕಂಗಾಲಾಗಿದ್ದಾರೆ. ಇದರ ಮಧ್ಯೆ ಇದೀಗ ಕಚ್ಚಾ ತೈಲ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವುದರಿಂದ ದೇಶಿ ಮಾರುಕಟ್ಟೆಯಲ್ಲಿ ಇಂಧನ ದರ ಕೂಡ ಹೆಚ್ಚಳವಾಗಲಿದೆ.