5 ತಿಂಗಳ ಕಂದಮ್ಮನ ತಪಾಸಣೆಗೆ ಯಾರೂ ಮುಂದಾಗದಕ್ಕೆ ಜೀವವೇ ಹೋಯ್ತು : ಕಣ್ಣೀರಿಟ್ಟ ತಂದೆ
ಉತ್ತರಪ್ರದೇಶ : ಅಪರಾಧಗಳ ಆಗರ ಉತ್ತರಪ್ರದೇಶದಲ್ಲೊಂದು ಅಮಾನವೀಯ ಘಟನೆ ನಡೆದಿದೆ.. 5 ತಿಂಗಳ ಕಂದಮ್ಮನ ತಪಾಸಣೆಗೆ ಯಾರೊಬ್ಬರೂ ಬಾರದೇ ಇದ್ದ ಪರಿಣಾಮ ಮಗು ಉಸಿರು ನಿಲ್ಲಿಸಿದೆ.. ಸರ್ಕಾರಿ ಆಸ್ಪತ್ರೆಯ ಹೊರಗೆ ತಂದೆ ಮೃತಮಗುವನ್ನ ತೋಳಿಗೆ ಅಪ್ಪಿ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ನನ್ನ ಮಗುವಿಗೆ ಚಿಕಿತ್ಸೆ ನೀಡಿಲ್ಲ, ಅವರ ನಿರ್ಲಕ್ಷ್ಯದಿಂದಾಗಿ ನನ್ನ ಮಗುವಿನ ಜೀವವೇ ಹೋಯ್ತು ಎಂದು ಕಣ್ಣೀರು ಹಾಕಿದ್ದಾರೆ. ಉತ್ತರ ಪ್ರದೇಶದ ಬಾಬರ್ಂಕಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಬಳಿ ಈ ಘಟನೆ ನಡೆದಿದೆ.
ನನ್ನ ಮಗುವಿನ ಆರೋಗ್ಯ ಗಂಭೀರ ಸ್ಥಿತಿ ತಲುಪಿದ್ದರು, ಕೊರೊನಾ ಭಯದಿಂದ ಯಾರೊಬ್ಬರೂ ರೋಗಿಗಳನ್ನು ಮುಟ್ಟಲು ಬರುವುದಿಲ್ಲ. ಎರಡು ತಾಸುಗಳ ಬಳಿಕ ವೈದ್ಯರು ನೋಡಿದರೂ, ಅಷ್ಟರಲ್ಲಿ ನನ್ನ ಹೆಣ್ಣುಮಗುವಿನ ಜೀವ ಹೋಯ್ತು ಎಂದು ಆಸ್ಪತ್ರೆ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ಸಂಬಂಧಿತ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದ್ದು, ತಂದೆ ಸಂಕಟ ನೋಡಿ ನೆಟ್ಟಿಗರು ಮರುಗಿದ್ದಾರೆ.. ಮತ್ತೊಂದೆಡೆ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕ್ತಿದ್ದಾರೆ. ಇನ್ನೂ ಪೊಲಿಸರು ಆ ವ್ಯಕ್ತಿ ಬಳಿ ಒಮದು ಲಿಖಿತ ದೂರು ನೀಡುವಂತೆ ಕೇಳಿದ್ದಾರೆ.
ಆದ್ರೆ ಆಸ್ಪತ್ರೆ ವ್ಯಕ್ತಿಯ ಆರೋಪವನ್ನು ತಳ್ಳಿ ಹಾಕಿದೆ. ಈ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಬರುವಾಗಲೇ ಮೃತಪಟ್ಟಿತ್ತು ಎಂದು ಹೇಳಿದ್ದಾರೆ. ಆಸ್ಪತ್ರೆಗೆ ಕರೆದುಕೊಂಡು ಬಂದ ಮಗುವನ್ನು ತಪಾಸಣೆ ಮಾಡಲಾಯಿತು. ಆದರೆ ಮನೆಯಿಂದ ಕರೆದುಕೊಂಡು ಬರುವಷ್ಟರಲ್ಲಿಯೇ ಮಗು ಮೃತಪಟ್ಟಾಗಿತ್ತು ಎಂದಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.