CSIR NAL Recruitment 2025 : ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ ಇದರಲ್ಲಿ ಅಗತ್ಯ ಇರುವ ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟಂಟ್ ಹಾಗೂ ಜೂನಿಯರ್ ಸ್ಟೆನೋಗ್ರಾಫರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆ : ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟಂಟ್, ಜೂನಿಯರ್ ಸ್ಟೆನೋಗ್ರಾಫರ್.
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಬೆಂಗಳೂರು, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 26 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆ ಹುದ್ದೆಗಳ ಸಂಖ್ಯೆ
ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟಂಟ್ 21
ಜೂನಿಯರ್ ಸ್ಟೆನೋಗ್ರಾಫರ್ 5
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : 10+2 ಅಥವಾ ತತ್ಸಮಾನ ಅರ್ಹತೆ ಜೊತೆಗೆ ಹುದ್ದೆಗೆ ನಿಗದಿಪಡಿಸಿದ ವೇಗದಲ್ಲಿ ಇಂಗ್ಲಿಷ್ ಹಾಗೂ ಹಿಂದಿ ಟೈಪಿಂಗ್ ಜ್ಞಾನ ಹೊಂದಿರಬೇಕು.
ವಯೋಮಿತಿ : ದಿನಾಂಕ ಮೇ 20, 2025ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ಗರಿಷ್ಠ ವಯೋಮಿತಿ ಮೀರಿರಬಾರದು.
• ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟಂಟ್ – ಗರಿಷ್ಠ 28 ವರ್ಷ
• ಜೂನಿಯರ್ ಸ್ಟೆನೋಗ್ರಾಫರ್ – ಗರಿಷ್ಠ 27 ವರ್ಷ
ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ
ವೇತನ :
ಹುದ್ದೆ ವೇತನ
ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟಂಟ್ 19900-63200
ಜೂನಿಯರ್ ಸ್ಟೆನೋಗ್ರಾಫರ್ 25500-81100
ಆಯ್ಕೆ ವಿಧಾನ :
• ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟಂಟ್ – ಓ.ಎಂ.ಆರ್ ಬೇಸ್ಡ್ ಅಥವಾ ಕಂಪ್ಯೂಟರ್ ಬೇಸ್ಡ್ ಟೆಸ್ಟ್, ಪ್ರೊಫೈಸಿಎನ್ಸಿ ಟೆಸ್ಟ್ ಇನ್ ಕಂಪ್ಯೂಟರ್ (ಟೈಪಿಂಗ್ ಟೆಸ್ಟ್).
• ಜೂನಿಯರ್ ಸ್ಟೆನೋಗ್ರಾಫರ್ – ಓ.ಎಂ.ಆರ್ ಬೇಸ್ಡ್ ಅಥವಾ ಕಂಪ್ಯೂಟರ್ ಬೇಸ್ಡ್ ಟೆಸ್ಟ್, ಪ್ರೊಫೈಸಿಎನ್ಸಿ ಟೆಸ್ಟ್ ಇನ್ ಸ್ಟೆನೋಗ್ರಫಿ.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ, ಮಹಿಳಾ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
• ಉಳಿದ ಅಭ್ಯರ್ಥಿಗಳು – ರೂ. 500
ಶುಲ್ಕ ಪಾವತಿಸುವ ವಿಧಾನ : ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಏಪ್ರಿಲ್ 16, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಮೇ 20, 2025
Website:https://recruit.nal.res.in/register.aspx








