CSK vs DC Match | ಹೆಡ್ ಟು ಹೆಟ್ ರೆಕಾರ್ಡ್ ನಲ್ಲಿ ಯಾರು ಬೆಸ್ಟ್..?
ಪ್ಲೇ ಆಫ್ಸ್ ಪ್ರವೇಶಿಸಲು ಕಾತರದಿಂದ ಎದುರು ನೋಡುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಇಂದು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ.
15ನೇ ಆವೃತ್ತಿಯ ಇಂಡಿಯನ್ ಪ್ರಿಮಿಯರ್ ಲೀಗ್ 55ನೇ ಪಂದ್ಯದಲ್ಲಿ ಚೆನ್ನೈ ಮತ್ತು ಡೆಲ್ಲಿ ತಂಡಗಳು ಮುಖಾಮುಖಿಯಾಗಲಿವೆ.
ಜಿದ್ದಾಜಿದ್ದಿನ ಕಾದಾಟಕ್ಕೆ ಮುಂಬೈನ ಡಾ.ಡಿ ವೈ ಪಾಟೀಲ್ ಕ್ರೀಡಾಂಗಣ ಸಾಕ್ಷಿಯಾಗಲಿದೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡ 15 ನೇ ಆವೃತ್ತಿಯಲ್ಲಿ ಈವರೆಗೂ 10 ಪಂದ್ಯಗಳನ್ನಾಡಿದೆ.
ಈ ಪೈಕಿ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿ ಏಳು ಪಂದ್ಯಗಳಲ್ಲಿ ಸೋಲು ಕಂಡಿದೆ.
ಇದರೊಂದಿಗೆ ಆರು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಒಂಭತ್ತನೇ ಸ್ಥಾನದಲ್ಲಿದೆ.
ಸಿಎಸ್ ಕೆ ಕಳೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಸೋಲು ಕಂಡಿದೆ.
ಈ ಪಂದ್ಯದಲ್ಲಿ ಚೆನ್ನೈ 13 ರನ್ ಗಳಿಂದ ಸೋತಿದ್ದು, ಮೊಯಿನ್ ಅಲಿ 34 ರನ್, ಕಾನ್ವೆ 56 ರನ್ ಗಳಿಸಿದ್ದರು.
ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ಆವೃತ್ತಿಯಲ್ಲಿ 10 ಪಂದ್ಯಗಳನ್ನಾಡಿದೆ.
ಈ ಪೈಕಿ ಐದು ಪಂದ್ಯಗಳಲ್ಲಿ ಗೆದ್ದು, ಐದು ಪಂದ್ಯಗಳಲ್ಲಿ ಸೋತಿದೆ.
ಹೀಗಾಗಿ 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಹೋರಾಟ ನಡೆಸಿತ್ತು.
ಈ ಪಂದ್ಯದಲ್ಲಿ ಡೆಲ್ಲಿಗೆ 21 ರನ್ ಗಳ ಜಯ ಸಿಕ್ಕಿದ್ದು, ದೇವಿಡ್ ವಾರ್ನಿರ್ 92 ಮತ್ತು ರೋವ್ ಮನ್ ಪೊವೆಲ್ 67 ರನ್ ಗಳಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸಲು ಉಭಯ ತಂಡಗಳು ಜಿದ್ದಾಜಿದ್ದಿನ ಹೋರಾಟ ನಡೆಸಲಿವೆ.
ಹೆಡ್ ಟು ಹೆಡ್ ರಿಕಾರ್ಡ್ ಹೇಗಿದೆ :
ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ಉಭಯ ತಂಡಗಳಿ ಈವರೆಗೂ 26 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡ 16 ಪಂದ್ಯಗಳಲ್ಲಿ ಗೆದ್ದರೇ ಡೆಲ್ಲಿ ಕ್ಯಾಪಿಟಲ್ಸ್ ತಂಡ 10 ಪಂದ್ಯಗಳಲ್ಲಿ ಗೆದ್ದಿದೆ.
ಇಂಡಿಯಾದಲ್ಲಿ ನಡೆದ 19 ಪಂದ್ಯಗಳಲ್ಲಿ ಡೆಲ್ಲಿ ಆರು, ಚೆನ್ನೈ 13 ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ.
ಚೆನ್ನೈ ವಿರುದ್ಧ ಡೆಲ್ಲಿ ಸರಿಸಾರಿ ಮೊತ್ತ 148 ರನ್ ಆಗಿದೆ. ಸಿಎಸ್ ಕೆ ಆವರೇಜ್ ಸ್ಕೋರ್ 162 ರನ್.
ಚೆನ್ನೈ ವಿರುದ್ಧ ಡೆಲ್ಲಿ ಪರ ಧವನ್ 426 ರನ್ ಗಳಿಸಿದ್ದಾರೆ. ಇತ್ತ ಡೆಲ್ಲಿ ವಿರುದ್ಧ ಧೋನಿ 565 ರನ್ ಗಳಿಸಿದ್ದಾರೆ.
ಕಳೆದ ಐದು ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೇಲು ಗೈ ಸಾಧಿಸಿದೆ.
ಡೆಲ್ಲಿ ನಾಲ್ಕು ಪಂದ್ಯಗಳಲ್ಲಿ ಗೆದ್ದಿದ್ದರೇ ಚೆನ್ನೈ ಒಂದು ಪಂದ್ಯದಲ್ಲಿ ಗೆದ್ದಿದೆ.
ಕಳೆದ ಆವೃತ್ತಿಯಲ್ಲಿ ಡೆಲ್ಲಿ ಎರಡು, ಸಿಎಸ್ಕೆ 1 ಪಂದ್ಯದಲ್ಲಿ ಗೆದ್ದಿದೆ.
CSK vs DC match Head To Head Records