CSK vs PBKS | ಚೆನ್ನೈ ಮತ್ತು ಪಂಜಾಬ್ ಪ್ಲೇಯಿಂಗ್ 11Prediction
15ನೇ ಆವೃತ್ತಿಯ ಇಂಡಿಯನ್ ಪ್ರಿಮಿಯರ್ ಲೀಗ್ ನ 11ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ತಂಡಗಳು ಮುಖಾಮುಖಿಯಾಗಲಿವೆ.
ಬ್ರಬೋರ್ನ್ ಮೈದಾನದಲ್ಲಿ ಈ ಪಂದ್ಯ ನಡೆಯಲಿದೆ. ಉಭಯ ತಂಡಗಳಿಗೂ ಗೆಲುವು ಅನಿವಾರ್ಯವಾಗಿದೆ.
ಮೊದಲ ಪಂದ್ಯ ಗೆದ್ದು ಎರಡನೇ ಪಂದ್ಯದಲ್ಲಿ ಸೋತಿರುವ ಪಂಜಾಬ್ ಇಂದಿನ ಪಂದ್ಯದಲ್ಲಿ ಜಯ ಸಾಧಿಸಿ ಗೆಲುವಿನ ಟ್ರ್ಯಾಕ್ ಗೆ ಮರಳಲು ಪ್ಲಾನ್ ಮಾಡಿಕೊಳ್ಳುತ್ತಿದೆ.
ಇತ್ತ ಈ ಬಾರಿಯ ಐಪಿಎಲ್ ನಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ.
ಹೀಗಾಗಿ ಪಕ್ಕಾಲೆಕ್ಕಾಚಾರದೊಂದಿಗೆ ಇಂದು ಉಭಯ ತಂಗಳು ಅಖಾಡಕ್ಕೆ ಧುಮುಕಲಿವೆ.
ಸಂಭಾವ್ಯ ತಂಡಗಳು
ಚೆನ್ನೈ ಸೂಪರ್ ಕಿಂಗ್ಸ್
ರುತುರಾಜ್ ಗಾಯಕ್ವಾಡ್, ರಾಬಿನ್ ಉತ್ತಪ್ಪ, ಮೊಯಿನ್ ಅಲಿ, ಅಂಬಟಿ ರಾಯುಡು, ಎಂಎಸ್ ಧೋನಿ (wk), ರವೀಂದ್ರ ಜಡೇಜಾ (c), ಶಿವಂ ದುಬೆ, ಡ್ವೇನ್ ಬ್ರಾವೋ, ಡ್ವೈನ್ ಪ್ರಿಟೋರಿಯಸ್, ಕ್ರಿಸ್ ಜೋರ್ಡಾನ್, ರಾಜವರ್ಧನ್ ಹಂಗರ್ಗೇಕರ್
ಪಂಜಾಬ್ ಕಿಂಗ್ಸ್
ಮಯಾಂಕ್ ಅಗರ್ವಾಲ್ (c), ಶಿಖರ್ ಧವನ್, ಜಾನಿ ಬೈರ್ಸ್ಟೋ, ಭಾನುಕಾ ರಾಜಪಕ್ಸೆ (WK), ಓಡಿಯನ್ ಸ್ಮಿತ್, ಶಾರುಖ್ ಖಾನ್, ಹರ್ಪ್ರೀತ್ ಬ್ರಾರ್, ರಿಷಿ ಧವನ್, ಕಗಿಸೊ ರಬಾಡ, ಅರ್ಶ್ದೀಪ್ ಸಿಂಗ್, ರಾಹುಲ್ ಚಾಹರ್
CSK vs PBKS Match Prediction









