CSK vs PBKS Match | ಹೆಡ್ ಟು ಹೆಡ್ ರೆಕಾರ್ಡ್ ಹೇಗಿದೆ ಗೊತ್ತಾ..?
ಐಪಿಎಲ್ ನ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಪಂಜಾಬ್ ಕಿಂಗ್ಸ್ ತಂಡ ಚಾಲೆಂಜ್ ಹಾಕಿದೆ. ವಾಂಖೆಡೆ ಮೈದಾನದಲ್ಲಿ 15ನೇ ಆವೃತ್ತಿಯ 38ನೇ ಪಂದ್ಯ ನಡೆಯಲಿದ್ದು, ಇದು ಸೇಡಿನ ಸಮರವಾಗಿದೆ. ಯಾಕಂದರೇ ಈ ಸೀಸನ್ ನಲ್ಲಿ ಚೆನ್ನೈ ಮತ್ತು ಪಂಜಾಬ್ ತಂಡಗಳು ಮುಖಾಮುಖಿಯಾಗಿದ್ದವು. ಆ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ 54 ರನ್ ಗಳಿಂದ ಗೆಲುವು ಸಾಧಿಸಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲಿ ಚೆನ್ನೈ ಸೇಡು ತೀರಿಸಿಕೊಳ್ಳುತ್ತಾ ಅಥವಾ ಪಂಜಾಬ್ ಗೆಲುವಿನ ಸವಾರಿ ಮುಂದುವರೆಸುತ್ತಾ ಕಾದು ನೋಡಬೇಕಿದೆ.
ಈ ಸೀಸನ್ ನಲ್ಲಿ ಮಯಾಂಕ್ ಅಗರ್ ವಾಲ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡ ಏಳು ಪಂದ್ಯಗಳನ್ನಾಡಿದ್ದು, ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ನಾಲ್ಕು ಪಂದ್ಯದಲ್ಲಿ ಸೋಲು ಕಂಡಿದೆ. ಹೀಗಾಗಿ ಪಂಜಾಬ್ ಕಿಂಗ್ಸ್ ತಂಡ ಪ್ರಸ್ತುತ ಅಂಕಪಟ್ಟಿಯಲ್ಲಿ 8 ನೇ ಸ್ಥಾನದಲ್ಲಿದೆ.
ಇತ್ತ ರವೀಂದ್ರ ಜಡೇಜಾ ನಾಯಕತ್ವದ ಚೆನ್ನೈ ತಂಡ ಕೂಡ ಏಳು ಪಂದ್ಯಗಳನ್ನಾಡಿದ್ದು, ಕೇವಲ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಐದು ಪಂದ್ಯಗಳಲ್ಲಿ ಸೋಲು ಕಂಡಿದೆ. ಹೀಗಾಗಿ ಅಂಕಪಟ್ಟಿಯಲ್ಲಿ ಚೆನ್ನೈ 9ನೇ ಸ್ಥಾನದಲ್ಲಿದೆ.
ಪಂಜಾಬ್ ತಂಡ ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಿತ್ತು. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 9 ವಿಕೆಟ್ ಗಳಿಂದ ಗೆಲುವು ಸಾಧಿಸಿತ್ತು. ಮಯಾಂಕ್ ಅಗರ್ ವಾಲ್ 24 ರನ್, ಜಿತೇಶ್ ಶರ್ಮಾ 32 ರನ್ ಗಳಿಸಿದ್ದರು.
ಚೆನ್ನೈ ಸೂಪರ್ ಕಿಂಗ್ಸ್ ತಂಡ ಕಳೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೆಣಸಿತ್ತು. ಈ ಪಂದ್ಯದಲ್ಲಿ ಚೆನ್ನೈ ತಂಡ ಮೂರು ವಿಕೆಟ್ ಗಳಿಂದ ಗೆಲುವು ಸಾಧಿಸಿತ್ತು. ರಾಯುಡು 40, ಉತ್ತಪ್ಪ 30 ರನ್ ಗಳಿಸಿದರು.
ಹೆಡ್ ಟು ಹೆಟ್ ರೆಕಾರ್ಡ್ ವಿಚಾರಕ್ಕೆ ಬಂದರೇ
ಇಂಡಿಯನ್ ಪ್ರಿಮಿಯರ್ ಲೀಗ್ ಇತಿಹಾಸದಲ್ಲಿ ಚೆನ್ನೈ ಮತ್ತು ಪಂಜಾಬ್ ತಂಡಗಳು ಈವರೆಗೂ 27 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೇಲು ಗೈ ಸಾಧಿಸಿದೆ. ಸಿಎಸ್ ಕೆ ತಂಡ 16 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಪಂಜಾಬ್ ಕಿಂಗ್ಸ್ ತಂಡ 11 ಮ್ಯಾಚ್ ಗಳಲ್ಲಿ ಗೆದ್ದಿದೆ. ಮುಂಬೈನ ವಾಂಖೆಡೆ ಮೈದಾನದಲ್ಲಿ ಈ ಎರಡು ತಂಡಗಳು ಮೂರು ಪಂದ್ಯಗಳಲ್ಲಿ ಗುದ್ದಾಡಿದ್ದು, ಒಂದು ಪಂದ್ಯದಲ್ಲಿ ಪಂಜಾಬ್ ತಂಡ, ಎರಡು ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆದ್ದಿದೆ. ಕಳೆದ ಐದು ಪಂದ್ಯಗಳಲ್ಲಿ ಚೆನ್ನೈ ಕಿಂಗ್ಸ್ ಮೂರು ಪಂದ್ಯದಲ್ಲಿ, ಪಂಜಾಬ್ ಕಿಂಗ್ಸ್ ಎರಡು ಪಂದ್ಯಗಳಲ್ಲಿ ಗೆದ್ದಿವೆ.
ಇನ್ನು ಮೊದಲು ಬ್ಯಾಟಿಂಗ್ ಮಾಡಿದಾಗ ಚೆನ್ನೈ ತಂಡ 8 ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್ ತಂಡ ಆರು ಪಂದ್ಯಗಳಲ್ಲಿ ಗೆದ್ದಿವೆ. ಸೆಕೆಂಡ್ ಬ್ಯಾಟಿಂಗ್ ಮಾಡಿದಾಗ ಚೆನ್ನೈ 8 ಪಂದ್ಯಗಳಲ್ಲಿ ಗೆದ್ದಿದ್ದರೇ ಪಂಜಾಬ್ ತಂಡ ಐದು ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದೆ. csk-vs-pbks-match-Punjab Kings vs Chennai Super Kings Head to Head Records