CSK vs RR Match | ಕಿಂಗ್ಸ್ ಬೇಟೆ ಹೇಗಿರಲಿದೆ ರಾಯಲ್ಸ್ ಸೇನೆ
ರಾಜಸ್ಥಾನ್ ರಾಯಲ್ಸ್ ತಂಡ ಇಂದು ತನ್ನ ಕೊನೆಯ ಪಂದ್ಯವನ್ನಾಡಲಿದೆ. ಈಗಾಗಲೇ ಪ್ಲೇ ಆಫ್ಸ್ ಗೆ ಎಂಟ್ರಿ ಪಡೆದಿರುವ ರಾಜಸ್ಥಾನ್ ಇಂದಿನ ಪಂದ್ಯ ಗೆದ್ದು ಪ್ಲೇ ಆಫ್ಸ್ ಅನ್ನು ಅಧಿಕೃತಪಡಿಸಿಕೊಳ್ಳುವ ತವಕದಲ್ಲಿದೆ. ಇಂಡಿಯನ್ ಪ್ರಿಮಿಯರ್ ಲೀಗ್ ನ 68 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಮುಂಬೈನ ಬ್ರಬೋರ್ನ್ ಮೈದಾನದಲ್ಲಿ ಈ ಪಂದ್ಯ ನಡೆಯಲಿದೆ.
ರಾಜಸ್ಥಾನ್ ರಾಯಲ್ಸ್ ತಂಡ ಈ ಆವೃತ್ತಿಯಲ್ಲಿ 13 ಪಂದ್ಯಗಳನ್ನಾಡಲಿದೆ. ಈ ಪೈಕಿ ಎಂಟು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಇನ್ನುಳಿದ ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಇದರೊಂದಿಗೆ ಅಂಕಪಟ್ಟಿಯಲ್ಲಿ ರಾಯಲ್ಸ್ ತಂಡ 16 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಕಳೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೆಣಸಿತ್ತು. ಈ ಪಂದ್ಯದಲ್ಲಿ ರಾಜಸ್ಥಾನ್ ತಂಡ 24 ರನ್ ಗಳಿಂದ ಜಯ ಸಾಧಿಸಿದ್ದು, ಯಶಸ್ವಿ ಜೈಸ್ವಾಲ್ 41 ರನ್ ಮತ್ತು ದೇವದತ್ ಪಡಿಕ್ಕಲ್ 39 ರನ್ ಗಳಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಇದೇ ಪ್ರದರ್ಶನವನ್ನು ಮುಂದುವರೆಸುವ ಪ್ಲಾನ್ ಮಾಡಿಕೊಂಡಿದೆ. ಇದಲ್ಲದೇ ಈ ಪಂದ್ಯದಲ್ಲಿ ಎಡವಟ್ಟು ಮಾಡಿಕೊಂಡು ರನ್ ರೇಟ್ ಕಳೆದುಕೊಂಡರೇ ಕೈಯಲ್ಲಿರುವ ಪ್ಲೇ ಆಫ್ಸ್ ಚಾನ್ಸ್ ಮಿಸ್ ಮಾಡಿಕೊಳ್ಳುವ ಅವಕಾಶವಿದೆ.
ಹೀಗಾಗಿ ಇಂದಿನ ಪಂದ್ಯದಲ್ಲಿ ಯಾವುದೇ ಯಡವಟ್ಟುಗಳನ್ನು ಮಾಡಿಕೊಳ್ಳದೇ ಗೆಲುವು ಸಾಧಿಸಲು ರಾಜಸ್ಥಾನ್ ತಂಡ ಪ್ಲಾನ್ ಮಾಡಿಕೊಂಡಿದೆ. ಇನ್ನು ಇವತ್ತಿನ ಪಂದ್ಯಕ್ಕಾಗಿ ರಾಜಸ್ಥಾನ್ ತಂಡದಲ್ಲಿ ಬದಲಾವಣೆಗಳಾಗುವ ಸಾಧ್ಯತೆಗಳಿಲ್ಲ.
ವಾಸ್ತವಾಗಿ ರಾಜಸ್ಥಾನ್ ತಂಡ ಈ ಹಿಂದಿನ ಸೀಸನ್ ಗಳಿಂತ ಬಲಿಷ್ಠವಾಗಿದೆ. ಬ್ಯಾಟಿಂಗ್, ಬೌಲಿಂಗ್ ನಲ್ಲಿ ಮ್ಯಾಚ್ ವಿನ್ನರ್ ಗಳ ದಂಡೇ ಇದೆ. ಬ್ಯಾಟಿಂಗ್ ನಲ್ಲಿ ಒಬ್ಬರ ಮೇಲೆ ಒಬ್ಬರು ಪೈಪೋಟಿಗೆ ಬಿದ್ದಂತೆ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ಬೌಲಿಂಗ್ ನಲ್ಲಿ ಎದುರಾಳಿಗಳ ಮೇಲೆ ಸವಾರಿ ಮಾಡುವಂತಹ ಬೌಲರ್ ಗಳಿದ್ದಾರೆ. ಒಟ್ಟಾರೆ ತಂಡ ಅನುಭವಿ ಆಟಗಾರರು ಮತ್ತು ಯುವಕರಿಂದ ಕೂಡಿದೆ.
ಆರಂಭಿಕರಾಗಿ ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್ ಉತ್ತಮ ಆರಂಭ ನೀಡುತ್ತಿದ್ದಾರೆ. ಸಂಜು ಸ್ಯಾಮ್ಸನ್, ಪಡಿಕಲ್, ನಿಶಾಮ್, ರಿಯಾನ್ ಮಿಡಲ್ ಆರ್ಡರ್ ನಲ್ಲಿ ಮಿಂಚುತ್ತಿದ್ದಾರೆ. ಬೌಲಿಂಗ್ ನಲ್ಲಿ ಟ್ರೆಂಟ್ ಬೋಲ್ಡ್, ಪ್ರಸಿದ್ಧ್ ಕೃಷ್ಣ ಪವರ್ ಪ್ಲೇ ನಲ್ಲಿ ವಿಕೆಟ್ ಪಡೆಯುತ್ತಿದ್ದಾರೆ. ಮಿಡಲ್ ನಲ್ಲಿ ರವಿಚಂದ್ರನ್ ಅಶ್ವಿನ್ ಯುಜವೇಂದ್ರ ಚಹಾಲ್ ವಿಕೆಟ್ ಬೇಟೆಯಾಡುತ್ತಿದ್ದಾರೆ. ಒಬೆಡ್ ಮೆಕಾಯ್, ನಿಶಾಮ್ ಐದನೇ ಬೌಲರ್ ಸ್ಥಾನ ತುಂಬುತ್ತಿದ್ದಾರೆ. ರವಿಚಂದ್ರನ್ ಆಲ್ ರೌಂಡರ್ ಆಟ ಮತ್ತು ಅನುಭವ ತಂಡಕ್ಕೆ ಪ್ಲಸ್ ಪಾಯಿಂಟ್ ಆಗಿದೆ
ರಾಜಸ್ಥಾನ್ ರಾಯಲ್ಸ್ ತಂಡದ ಪ್ಲೇಯಿಂಗ್ ಇಲೆವೆಲ್
ಜೋಸ್ ಬಟ್ಲರ್
ಯಶಸ್ವಿ ಜೈಸ್ವಾಲ್
ದೇವದತ್ ಪಡಿಕ್ಕಲ್
ಸಂಜು ಸ್ಯಾಮ್ಸನ್
ಜೇಮ್ಸ್ ನೀಶಮ್
ರಿಯಾನ್ ಪರಾಗ್
ರವಿಚಂದ್ರನ್ ಅಶ್ವಿನ್
ಟ್ರೆಂಟ್ ಬೌಲ್ಟ್
ಪ್ರಸಿದ್ಧ್ ಕೃಷ್ಣ
ಯುಜ್ವೇಂದ್ರ ಚಾಹಲ್
ಒಬೆದ್ ಮೆಕಾಯ್
csk-vs-rr-match-Rajasthan Royals playing 11