CSK vs SRH Match | ಹೆ್ಡ್ ಟು ಹೆಡ್ ರೆಕಾರ್ಡ್ ನಲ್ಲಿ ಯಾರು ಬೆಸ್ಟ್
ಐಪಿಎಲ್ ನ 46ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಮುಖಾಮುಖಿಯಾಗಲಿವೆ.
ತಲಾ ಎಂ.ಎಸ್.ಧೋನಿ ಮತ್ತೆ ತಂಡದ ಚುಕ್ಕಾಣಿ ಹಿಡಿದಿದ್ದು, ತಂಡ ಗತ ವೈಭವವನ್ನು ಪಡೆದುಕೊಳ್ಳುತ್ತಾ ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ.
ಎಂಸಿಎ ಅಂಗಳದಲ್ಲಿ ನಡೆಯಲಿರುವ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸನ್ ರೈಡರ್ಸ್ ಹೈದರಾಬಾದ್ ವಿರುದ್ಧ ಗುದ್ದಾಟ ನಡೆಸಲಿದೆ.
ಕಳೆದ ಬಾರಿ ಈ ಎರಡೂ ತಂಡಗಳು ಮುಖಾಮುಖಿಯಾಗಿದ್ದಾಗ ಹೈದರಬಾದ್ ತಂಡ ಗೆಲುವು ಸಾಧಿಸಿತ್ತು.
ಹೀಗಾಗಿ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸೇಡು ತೀರಿಸಿಕೊಳ್ಳುತ್ತಾ ಅನ್ನೋದನ್ನ ಕಾದು ನೋಡಬೇಕಾಗಿದೆ.
ಕೇನ್ ವಿಲಿಯಮ್ ಸನ್ ನಾಯಕತ್ವದ ಸನ್ ರೈಸರ್ಸ್ ಹೈದರಾಬಾದ್ ತಂಡ ಈ ಬಾರಿಯ ಐಪಿಎಲ್ ನಲ್ಲಿ ಅದ್ಭುತ ಪ್ರದರ್ಶನ ನೀಡಿದೆ.
ಆಡಿರುವ ಎಂಟು ಪಂದ್ಯಗಳಲ್ಲಿ ಐದು ಪಂದ್ಯಗಳನ್ನು ಗೆದ್ದು, ಮೂರು ಪಂದ್ಯಗಳಲ್ಲಿ ಸೋಲು ಕಂಡಿದೆ. ಹೀಗಾಗಿ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.
ಇತ್ತ ಸರ್ ರವೀಂದ್ರ ಜಡೇಜಾ ಸಾರಥ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಎಂಟು ಪಂದ್ಯಗಳನ್ನಾಡಿದ್ದು, ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.
ಆರು ಪಂದ್ಯಗಳಲ್ಲಿ ಸೋತು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.
ಕಳೆದ ಪಂದ್ಯದಲ್ಲಿ ಹೈದರಾಬಾದ್ ತಂಡ ಗುಜರಾತ್ ಟೈಟಾನ್ಸ್ ವಿರುದ್ಧ ಸೆಣಸಿತ್ತು.
ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಐದು ವಿಕೆಟ್ ಗಳಿಂದ ಸೋಲು ಕಂಡಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿದೆ.
ಚೆನ್ನೈ ತಂಡ ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 11 ರನ್ ಗಳಿಂದ ಸೋಲು ಕಂಡಿದೆ. ಈ ಪಂದ್ಯದಲ್ಲಿ ಅಂಬಾಟಿ ರಾಯುಡು 78 ರನ್ ಗಳಿಸಿದ್ದರು.
ಈ ಎರಡೂ ತಂಡಗಳು ಈವರೆಗೂ ಇಂಡಿಯನ್ ಪ್ರಿಮಿಯರ್ ಲೀಗ್ ಇತಿಹಾಸದಲ್ಲಿ 17 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು ಚೆನ್ನೈ ಸೂಪರ್ ಕಿಂಗ್ಸ್ ಮೇಲು ಗೈ ಸಾಧಿಸಿದೆ.
ಚೆನ್ನೈ ತಂಡ 12 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೇ ಹೈದರಾಬಾದ ತಂಡ ಐದು ಪಂದ್ಯಗಳಲ್ಲಿ ಗೆದ್ದಿದೆ.
ಕಳೆದ ಐದು ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೂರು ಪಂದ್ಯಗಳಲ್ಲಿ ಗೆದ್ದಿದ್ದು, ಎರಡು ಪಂದ್ಯಗಳಲ್ಲಿ ಸನ್ ರೈಡರ್ಸ್ ಹೈದರಾಬಾದ್ ತಂಡ ಗೆದ್ದಿದೆ.
ಮೊದಲು ಬ್ಯಾಟಿಂಗ್ ಮಾಡಿದಾಗ ಚೆನ್ನೈ ಸೂಪರ್ ಕಿಂಗ್ಸ್ ನಾಲ್ಕು ಬಾರಿ, ಹೈದರಾಬಾದ್ ತಂಡ ಎರಡು ಬಾರಿ ಗೆದ್ದಿದೆ. ಚೇಸಿಂಗ್ ಮಾಡುವಾಗ ಚೆನ್ನೈ ತಂಡ ಬರೋಬ್ಬರಿ ಎಂಟು ಬಾರಿ ಜಯ ಸಾಧಿಸಿದ್ದರೇ ಸನ್ ರೈಸರ್ಸ್ ಹೈದರಾಬಾದ್ ತಂಡ ಮೂರು ಬಾರಿ ಗೆದ್ದಿದೆ.
csk-vs-srh-match-head to head record









