ಬೆಂಗಳೂರು : ಕಳೆದ ತಿಂಗಳ ಅಂತ್ಯದಲ್ಲಿ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ಸಿ.ಟಿ.ರವಿ(CT Ravi) ಅವರಿಗೆ ಬಿಜೆಪಿ (BJP) ವರಿಷ್ಠರು ಮತ್ತೊಂದು ಮಹತ್ವದ ಜವಾಬ್ದಾರಿ ಕೊಟ್ಟಿದ್ದಾರೆ. ನಿನ್ನೆ ಜೆ.ಪಿ. ನಡ್ಡಾ ಅವರ ನೇತೃತ್ವದಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಬಿಜೆಪಿ(BJP) ಬಿಗ್ ಬಾಸ್ ಗಳು ಜವಾಬ್ದಾರಿಗಳನ್ನು ಹಂಚಿಕೆ ಮಾಡಿದ್ದು, ಸಿ.ಟಿ. ರವಿ(CT Ravi) ಅವರನ್ನು ದಕ್ಷಿಣ ಭಾರತದ ಉಸ್ತುವಾರಿಯಾಗಿ ನೇಮಕ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಲ್ಲದೆ ಸಿ.ಟಿ.ರವಿ ಕರ್ನಾಟಕದ ಉಸ್ತುವಾರಿ ಕೂಡ ಆಗಿದ್ದಾರೆ. ಇದೇ ಮೊದಲ ಬಾರಿಗೆ ರಾಜ್ಯದವರೇ ಕರ್ನಾಟಕ ರಾಜ್ಯ ಬಿಜೆಪಿಗೆ ಉಸ್ತುವಾರಿಯಾಗಿದ್ದಾರೆ.
ಇದನ್ನೂ ಓದಿ : ಬಿಜೆಪಿಯಿಂದ ನನಗೆ ಡಿಸಿಎಂ ಆಫರ್ ಬಂದಿತ್ತು : ಜಿ.ಟಿ.ಡಿ
ಸದ್ಯ ಸಿ.ಟಿ.ರವಿ ಅವರಿಗೆ ತಾತ್ಕಾಲಿಕವಾಗಿ ಉಸ್ತುವಾರಿ ಸ್ಥಾನ ನೀಡಿರುವ ಹೈಕಮಾಂಡ್ ಬಿಹಾರ ಚುನಾವಣೆ ಬಳಿಕ ಬದಲಾವಣೆ ಮಾಡುವ ಸಾಧ್ಯತೆಯಿದೆ.
ಬಿಜೆಪಿಯಲ್ಲಿ ಒಬ್ಬರಿಗೆ ಒಂದು ಹುದ್ದೆ ಎಂಬ ಅಲಿಖಿತ ನಿಯಮ ಇರುವುದರಿಂದ ಬಿ.ಎಸ್. ಯಡಿಯೂರಪ್ಪನವರ ಸಂಪುಟದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾಗಿದ್ದ ಸಿ.ಟಿ. ರವಿ ಅವರು ಕೆಲವೇ ದಿನಗಳ ಹಿಂದೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಇದನ್ನೂ ಓದಿ : ದೆಹಲಿಯಲ್ಲಿ ದಿ.ಸುರೇಶ್ ಅಂಗಡಿ ಸ್ಮಾರಕ : ಸಿಎಂ ಬಿಎಸ್ ವೈ
ಇದರ ಬೆನ್ನಲ್ಲೇ ಸಿಟಿ ರವಿಗೆ ದಕ್ಷಿಣ ಭಾರತದ ಸಂಪೂರ್ಣ ಉಸ್ತುವಾರಿ ನೀಡಿ ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದೆ.









