ಚಿಕ್ಕಮಗಳೂರು : ಕಾಂಗ್ರೆಸ್- ಬಿಜೆಪಿ ಪಕ್ಷದವರು ಶತ್ರುಗಳಲ್ಲ, ರಾಜಕೀಯ ವಿರೋಧಿಗಳಷ್ಟೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿಕೆ ನೀಡಿದ್ದಾರೆ.
ಚಿಕ್ಕಮಗಳೂರಿನಲ್ಲಿ `ಸಿದ್ದರಾಮಯ್ಯರ ಕಾಡುಮನುಷ್ಯ ಟ್ವೀಟ್’ ವಿಚಾರವಾಗಿ ಮಾತನಾಡಿದ ಸಿ.ಟಿ.ರವಿ,ಸಿದ್ದರಾಮಯ್ಯ ಅವರಿಗೆ ಬುದ್ಧಿ ಹೇಳುವಷ್ಟು ನಾವು ದೊಡ್ಡವರಲ್ಲ.
ಬೀದಿಯಲ್ಲಿ ಜಗಳ ಆಡಿದ ರೀತಿಯಲ್ಲಿ ಭಾಷೆ ಬಳಸಿರುವುದು ಸೂಕ್ತವಲ್ಲ. ಕಾಂಗ್ರೆಸ್- ಬಿಜೆಪಿ ಪಕ್ಷದವರು ಶತ್ರುಗಳಲ್ಲ, ರಾಜಕೀಯ ವಿರೋಧಿಗಳಷ್ಟೆ.
ರಾಜಕೀಯ ಟೀಕೆ, ವ್ಯಕ್ತಿಗತ ಅಸಹನೆ ದ್ವೇಷಿಸಲು ಬಳಕೆಯಾಗಬಾರದು. ಕಟೀಲ್ ವಿಚಾರವಾಗಿ ಅವರು ಬಳಸಿದ ಭಾಷೆಯ ಬಗ್ಗೆ ಅವರೇ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಹೇಳಿದರು.
ಬುಧವಾರ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಕಿಡಿಕಾರಿದ್ದ ಸಿದ್ದರಾಮಯ್ಯ, ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಒಬ್ಬ ಕಾಡು ಮನುಷ್ಯ, ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಈ ವ್ಯಕ್ತಿಯನ್ನು ಜನರ ಹಿತದೃಷ್ಟಿಯಿಂದ ಬಿಜೆಪಿ ತತ್ ಕ್ಷಣ ಕಾಡಿಗೆ ಕೊಂಡು ಹೋಗಿ ಬಿಡಬೇಕು ಎಂದು ಟ್ವೀಟ್ ಮಾಡಿದ್ದರು.
ಇದಕ್ಕೆ ಕರ್ನಾಟಕ ಬಿಜೆಪಿ, ಮಾನ್ಯ ಸಿದ್ದರಾಮಯ್ಯನವರೇ, ನೀವು ಬಳಸುತ್ತಿರುವ ಪದಗಳೇ ಯಾರು ಕಾಡು ಮನುಷ್ಯ’ ಎಂಬುದನ್ನು ಸಾಬೀತುಪಡಿಸುತ್ತಿದೆ. ಕಾಡುಮನುಷ್ಯ, ನಾಲಾಯಕ್, ಬೀದಿ ಅಲೆಯುತ್ತಿದ್ದವ, ಎಲುಬಿಲ್ಲದವ ಎಂಬ ನಿಮ್ಮ ಮಾತುಗಳೇ ಕಾಂಗ್ರೆಸ್ ಸಂಸ್ಕೃತಿಯನ್ನು ಬಿಂಬಿಸುತ್ತಿದೆ. ನೀವು ರಾಜ್ಯ ಕಾಂಗ್ರೆಸ್‍ನ ವಿದೂಷಕಇದ್ದ ಹಾಗೆ ಹಾಗಿದೆ! ಎಂದು ಟ್ವೀಟ್‍ನಲ್ಲಿ ಪ್ರತ್ಯುತ್ತರ ನೀಡಿದೆ.