CT Ravi | ನಾನು ಕೊತ್ವಾಲ್ ರಾಮಚಂದ್ರನ ಶಿಷ್ಯ ಅಲ್ಲ
ಚಿಕ್ಕಮಗಳೂರು : ಹರಿಪ್ರಸಾದ್ ರೀತಿಯಲ್ಲಿ ನಾನು ಕೊತ್ವಾಲ್ ರಾಮಚಂದ್ರನ ಶಿಷ್ಯ ಅಲ್ಲ ಎಂದು ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಿಡಿಕಾದ್ದಾರೆ.
ಲೂಟಿ ರವಿ ಮೊದಲು ಸಂವಿಧಾನಕ್ಕೆ ಗೌರವ ಕೊಡುವುದನ್ನು ಕಲಿಯಲಿ ಎಂಬ ಬಿ.ಕೆ ಹರಿಪ್ರಸಾದ್ ಹೇಳಿಕೆಗೆ ಸಿ.ಟಿ ರವಿ ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಹಫ್ತಾ ಗ್ಯಾಂಗ್ ನಾಯಕರೆಲ್ಲ ಪೊಲಿಟಿಕಲ್ ಲೇಬಲ್ ಅಂಟಿಸಿಕೊಂಡರೆ ಲೀಡರ್ ಆಗೋಕೆ ಸಾಧ್ಯವಿಲ್ಲ.

ಹರಿಪ್ರಸಾದ್ ಒಂದು ಕಾಲದಲ್ಲಿ ಹಫ್ತಾ ವಸೂಲಿ ಗ್ಯಾಂಗನಲ್ಲಿದ್ದವರು. ಹರಿಪ್ರಸಾದ್ ನನಗೆ ಸರ್ಟಿಫಿಕೇಟ್ ಕೊಡುವ ಅವಶ್ಯಕತೆ ಇಲ್ಲ.
ಈವರೆಗೂ ಒಂದೇ ಒಂದು ಚುನಾವಣೆಯಲ್ಲಿ ಹರಿಪ್ರಸಾದ್ ಗೆದ್ದಿಲ್ಲ, ಗೆಲ್ಲೋಕೆ ಸಾಧ್ಯನೂ ಇಲ್ಲ ಎಂದು ಸಿ.ಟಿ.ರವಿ ಕಿಡಿಕಾರಿದ್ದಾರೆ.
ಇನ್ನು ಹರಿಪ್ರಸಾದ್ ರೀತಿಯಲ್ಲಿ ನಾನು ಕೊತ್ವಾಲ್ ರಾಮಚಂದ್ರನ ಶಿಷ್ಯನು ಅಲ್ಲ. ನನ್ನ ಹಿಂದೆ ಹಫ್ತ ವಸೂಲಿ ಮಾಡಿದ ಕ್ಯಾರೆಕ್ಟರ್ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.








