ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆಯಲ್ಲಿ ತಪ್ಪೇನು : ಸಿ.ಟಿ.ರವಿ
ಚಿಕ್ಕಮಗಳೂರು : ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ರಾಜ್ಯದೆಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ.
ಆದ್ರೆ ಸರ್ಕಾರದ ನಿರ್ಧಾರವನ್ನು ಬಿಜೆಪಿ ರಾಷ್ಟೀಯ ಕಾರ್ಯದರ್ಶಿ ಸಿ.ಟಿ ರವಿ ಸಮರ್ಥಿಸಿಕೊಂಡಿದ್ದು, ಅಭಿವೃದ್ಧಿ ನಿಗಮ ಸ್ಥಾಪನೆಯಲ್ಲಿ ತಪೇನು ಎಂದು ಪ್ರಶ್ನಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತರ ಅಭಿವೃದ್ಧಿ ನಿಗಮಗಳಂತೆ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲಾಗಿದೆ. ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.
ಇನ್ನು ಕರ್ನಾಟಕ ರಾಜ್ಯದ ಹಿತಾಸಕ್ತಿಯೇ ಮುಖ್ಯ ಎನ್ನುವುದಾದರೆ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಯಾಕೆ ಬೇಕು,
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಯಾಕೆ ಬೇಕು? ಭೋವಿ, ಅಂಬೇಡ್ಕರ್, ಕಾಡುಗೊಲ್ಲ, ಉಪ್ಪಾರ ಸೇರಿದಂತೆ ಹತ್ತಾರು ಅಭಿವೃದ್ಧಿ ನಿಗಮಗಳಿವೆ.
ಅದೇ ರೀತಿ ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸಲಾಗುತ್ತಿದೆ. ಇದರಲ್ಲಿ ತಪ್ಪು ಹುಡುಕುವರು ಟಿಪ್ಪು ಜಯಂತಿ ವೇಳೆ ಯಾಕೆ ಸುಮ್ಮನಿದ್ದರು,
ಪೇಟೆರೌಡಿ.. ಜಲೀಲ.. ಸುಮಲತಾ – ಪ್ರತಾಪ್ ಸಿಂಹ ಮಧ್ಯೆ ವಾಗ್ಯುದ್ಧ
ಟಿಪ್ಪು ಕನ್ನಡ ಪ್ರೇಮಿನಾ, ಅವನ ಕಾಲದಲ್ಲೇ ಊರುಗಳ ಹೆಸರು ಬದಲಾಗಿದ್ದು ಎಂದು ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.
ನಮ್ಮ ರಾಜ್ಯದಾದ್ಯಂತ ಮರಾಠಿಗರು ಇದ್ದಾರೆ. ಅವರ ಅಭಿವೃದ್ಧಿಗೋಸ್ಕರ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲಾಗಿದೆ.
ಮರಾಠರು ಬೆಳಗಾವಿ, ಬೀದರ್ ಮಾತ್ರವಲ್ಲ ನಮ್ಮ ಜಿಲ್ಲೆಯಲ್ಲೂ ಇದ್ದಾರೆ. ಕನ್ನಡ ರಾಜ್ಯಭಾಷೆಯಾಗಿಟ್ಟುಕೊಂಡೇ ವಿವಿಧ ಭಾಷೆಗಳ ಅಕಾಡೆಮಿಗಳನ್ನು ಮಾಡಿದ್ದೇವೆ.
ಆದರೆ ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಇದರಲ್ಲಿ ಎರಡು ಮಾತಿಲ್ಲ. ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸಲಾಗಿದೆ ಅಷ್ಟೆ ಎಂದು ಸಿ.ಟಿ.ರವಿ ಹೇಳಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel