CT Ravi
ಹುಬ್ಬಳ್ಳಿ; ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತ್ರತ್ವದಲ್ಲಿ ದೇಶದಲ್ಲಿ ಸುಧಾರಣಾ ಪರ್ವ ಆರಂಭವಾಗಿದೆ. ರಾಮ ಮಂದಿರ ನಿರ್ಮಾಣಕ್ಕೆ ಚಾಲನೆ ನೀಡಿದ್ದೇವೆ. ಕಾಶ್ಮೀರದಲ್ಲಿ ಪ್ರತ್ಯೇಕತಾ ವಾದವನ್ನು ಅಂತ್ಯಗೊಳಿಸಿದ್ದೇವೆ. ಕಾಂಗ್ರೆಸ್ ಸರ್ಕಾರವಿದ್ದಾಗ ವ್ಯಾಪಕ ಭ್ರಷ್ಟಾಚಾರವಿತ್ತು. ಈಗ ಭ್ರಷ್ಟಾಚಾರ, ವಿಳಂಭಕ್ಕೆ ಆಸ್ಪದವಿಲ್ಲದಂತೆ ಆಡಳಿತ ಸುಧಾರಣೆಯಾಗಿದೆ. ಕಾರ್ಮಿಕ ಕಾಯ್ದೆ ತಿದ್ದುಪಡಿಯಿಂದ ದುಡಿಯುವ ವರ್ಗಕ್ಕೆ ಅನುಕೂಲವಾಗಿದೆ. ನಿರುಪಯುಕ್ತ ಕಾಯ್ದೆಗಳನ್ನು ರದ್ದುಪಡಿಸಲಾಗಿದೆ. ಎಲ್ಲದಕ್ಕೂ ಕಲಶಪ್ರಾಯವಾದ ಹೊಸ ಶಿಕ್ಷಣ ನೀತಿ ಜಾರಿಗೆ ತರಲಾಗಿದೆ. ಪ್ರಧಾನಿಗಳು ಮತ್ತು ಸರ್ಕಾರದ ಜನಪ್ರಿಯತೆ ಏರು ಗತಿಯಲ್ಲಿ ಸಾಗಿದೆ. ಸಂಕಷ್ಟದ ಕಾಲದಲ್ಲೂ ಪ್ರಾಮಾಣಿಕ ಆಡಳಿತ ನೀಡುತ್ತಿದ್ದೇವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಹೇಳಿದ್ದಾರೆ.
‘ಮತ್ತೊಮ್ಮೆ ಸಿಎಂ ಆದ್ರೆ 10 ಕೆಜಿ ಅಕ್ಕಿ ಕೊಡುವೆ’ : ಸಿದ್ದರಾಮಯ್ಯ..!
ಹುಬ್ಬಳ್ಳಿಯಲ್ಲಿ ಮಾತನಾಡಿರುವ ಅವರು ವಿಧಾನ ಪರಿಷತ್ ಚುನಾವಣೆ ನಡೆಯುತ್ತಿರುವ ಎಲ್ಲಾ ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಲ್ಲದೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ನಂತರ ಬರ, ಅತಿವೃಷ್ಟಿ, ಕೋವಿಡ್ ಸಮಸ್ಯೆ ಎದುರಾಗಿದೆ. ಸಂಕಷ್ಟಗಳ ನಡುವೆಯೂ ಸಿಎಂ ಯಡಿಯೂರಪ್ಪನವರ ನೇತ್ರತ್ವದಲ್ಲಿ ಜನರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಆಗುತ್ತಿದೆ. ಕೊವಿಡ್ ಸಂಕಷ್ಟದಿಂದ ಆರ್ಥಿಕತೆ ಸುಸ್ಥಿಗೆ ಬಂದಿಲ್ಲ. ಪ್ರತಿ ಶಾಸಕರ ಕ್ಷೇತ್ರಕ್ಕೆ ನಿರೀಕ್ಷಿತ ಅನುದಾನ ಸಿಗುತ್ತಿಲ್ಲ. ಇರುವ ಅನುದಾನ ಬಳಸಿಕೊಂಡು ಕೆಲಸ ಮಾಡಬೇಕಾಗುತ್ತೆ. ಆದ್ಯತಾ ವಲಯಗಳಿಗೆ ಹಣಕಾಸು ಬಿಡುಗಡೆ ಮಾಡಲಾಗುತ್ತಿದೆ ಎಂದರು. ರಾಜ್ಯದಲ್ಲಿ ನೆರೆ ನಿರ್ವಹಣೆ ಸಮರ್ಪಕವಾಗಿ ನಡೆಯುತ್ತಿದೆ. ಜಿಎಸ್‌ಟಿ ಕೌನ್ಸಿಲ್‌ನಲ್ಲಿ ಚರ್ಚೆಯ ನಂತರ ಕೇಂದ್ರವೇ ಸಾಲ ಪಡೆದು ರಾಜ್ಯಕ್ಕೆ ಕೊಡುತ್ತಿದೆ. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ನಿಯಮಾವಳಿಗಳಂತೆ ರೈತರಿಗೆ ಪರಿಹಾರ ಹಣ ಬಂದಿದೆ ಎಂದು ತಿಳಿಸಿದರು.
ಇದೇ ವೇಳೆ ಸಿಎಂ ಯಡಿಯೂರಪ್ಪ ಹೆಚ್ಚು ದಿನಗಳ ಕಾಲ ಅಧಿಕಾರದಲ್ಲಿ ಇರುವುದಿಲ್ಲ ಎಂಬ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಹಲವು ಕಾರಣಕ್ಕೆ ಯತ್ನಾಳ್ ಅವರು ಆಗಾಗ ಈ ರೀತಿಯ ಹೇಳಿಕೆಗಳನ್ನು ಕೊಡುತ್ತಿರುತ್ತಾರೆ. ಅವರ ಹೇಳಿಕೆಗಳಿಗೆ ನಾನು ಹೆಚ್ಚಿನ ಪ್ರತಿಕ್ರಿಯೆ ಕೊಡಲ್ಲ. ಪಕ್ಷ ಯಾವ ಸಂದರ್ಭದಲ್ಲಿ ಏನೇನು ಶಿಸ್ತು ಕ್ರಮ ಕೈಗೊಳ್ಳಬೇಕೋ ಕೈಗೊಳ್ಳುತ್ತೆ. ಪಕ್ಷದ ಆಂತರಿಕ ವಿಚಾರಗಳನ್ನು ಸೂಕ್ತ ವೇದಿಕೆಯಲ್ಲಿ ಚರ್ಚಿಸಲಾಗುವುದು ಎಂದಿದ್ದಾರೆ.
CT Ravi
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








