ADVERTISEMENT
Wednesday, May 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ದೇಶದಲ್ಲಿ ಸುಧಾರಣಾ ಪರ್ವ ಆರಂಭವಾಗಿದೆ: ಸಿ ಟಿ ರವಿ

Namratha Rao by Namratha Rao
October 20, 2020
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

CT Ravi

ಹುಬ್ಬಳ್ಳಿ; ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತ್ರತ್ವದಲ್ಲಿ ದೇಶದಲ್ಲಿ ಸುಧಾರಣಾ ಪರ್ವ ಆರಂಭವಾಗಿದೆ. ರಾಮ ಮಂದಿರ ನಿರ್ಮಾಣಕ್ಕೆ ಚಾಲನೆ ನೀಡಿದ್ದೇವೆ. ಕಾಶ್ಮೀರದಲ್ಲಿ ಪ್ರತ್ಯೇಕತಾ ವಾದವನ್ನು ಅಂತ್ಯಗೊಳಿಸಿದ್ದೇವೆ. ಕಾಂಗ್ರೆಸ್ ಸರ್ಕಾರವಿದ್ದಾಗ ವ್ಯಾಪಕ ಭ್ರಷ್ಟಾಚಾರವಿತ್ತು. ಈಗ ಭ್ರಷ್ಟಾಚಾರ, ವಿಳಂಭಕ್ಕೆ ಆಸ್ಪದವಿಲ್ಲದಂತೆ ಆಡಳಿತ ಸುಧಾರಣೆಯಾಗಿದೆ. ಕಾರ್ಮಿಕ ಕಾಯ್ದೆ ತಿದ್ದುಪಡಿಯಿಂದ ದುಡಿಯುವ ವರ್ಗಕ್ಕೆ ಅನುಕೂಲವಾಗಿದೆ. ನಿರುಪಯುಕ್ತ ಕಾಯ್ದೆಗಳನ್ನು ರದ್ದುಪಡಿಸಲಾಗಿದೆ. ಎಲ್ಲದಕ್ಕೂ ಕಲಶಪ್ರಾಯವಾದ ಹೊಸ ಶಿಕ್ಷಣ ನೀತಿ ಜಾರಿಗೆ ತರಲಾಗಿದೆ. ಪ್ರಧಾನಿಗಳು ಮತ್ತು ಸರ್ಕಾರದ ಜನಪ್ರಿಯತೆ ಏರು ಗತಿಯಲ್ಲಿ ಸಾಗಿದೆ. ಸಂಕಷ್ಟದ ಕಾಲದಲ್ಲೂ ಪ್ರಾಮಾಣಿಕ ಆಡಳಿತ ನೀಡುತ್ತಿದ್ದೇವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾ‌ನ ಕಾರ್ಯದರ್ಶಿ ಸಿ.ಟಿ‌. ರವಿ ಅವರು ಹೇಳಿದ್ದಾರೆ.CT Ravi

Related posts

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

May 6, 2026
ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

May 6, 2026

‘ಮತ್ತೊಮ್ಮೆ  ಸಿಎಂ ಆದ್ರೆ 10 ಕೆಜಿ ಅಕ್ಕಿ ಕೊಡುವೆ’ : ಸಿದ್ದರಾಮಯ್ಯ..!

ಹುಬ್ಬಳ್ಳಿಯಲ್ಲಿ ಮಾತನಾಡಿರುವ ಅವರು  ವಿಧಾನ ಪರಿಷತ್‌ ಚುನಾವಣೆ ನಡೆಯುತ್ತಿರುವ ಎಲ್ಲಾ ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದು  ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಲ್ಲದೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ನಂತರ ಬರ, ಅತಿವೃಷ್ಟಿ, ಕೋವಿಡ್ ಸಮಸ್ಯೆ ಎದುರಾಗಿದೆ. ಸಂಕಷ್ಟಗಳ ನಡುವೆಯೂ ಸಿಎಂ ಯಡಿಯೂರಪ್ಪನವರ ನೇತ್ರತ್ವದಲ್ಲಿ ಜನರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಆಗುತ್ತಿದೆ. ಕೊವಿಡ್ ಸಂಕಷ್ಟದಿಂದ ಆರ್ಥಿಕತೆ ಸುಸ್ಥಿಗೆ ಬಂದಿಲ್ಲ. ಪ್ರತಿ ಶಾಸಕರ ಕ್ಷೇತ್ರಕ್ಕೆ ನಿರೀಕ್ಷಿತ ಅನುದಾನ ಸಿಗುತ್ತಿಲ್ಲ. ಇರುವ ಅನುದಾನ ಬಳಸಿಕೊಂಡು ಕೆಲಸ ಮಾಡಬೇಕಾಗುತ್ತೆ. ಆದ್ಯತಾ ವಲಯಗಳಿಗೆ ಹಣಕಾಸು ಬಿಡುಗಡೆ ಮಾಡಲಾಗುತ್ತಿದೆ ಎಂದರು. ರಾಜ್ಯದಲ್ಲಿ ನೆರೆ ನಿರ್ವಹಣೆ ಸಮರ್ಪಕವಾಗಿ ನಡೆಯುತ್ತಿದೆ. ಜಿಎಸ್‌ಟಿ ಕೌನ್ಸಿಲ್‌ನಲ್ಲಿ ಚರ್ಚೆಯ ನಂತರ ಕೇಂದ್ರವೇ ಸಾಲ ಪಡೆದು ರಾಜ್ಯಕ್ಕೆ ಕೊಡುತ್ತಿದೆ. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ನಿಯಮಾವಳಿಗಳಂತೆ ರೈತರಿಗೆ ಪರಿಹಾರ ಹಣ ಬಂದಿದೆ ಎಂದು ತಿಳಿಸಿದರು.CT Ravi

ಇದೇ ವೇಳೆ  ಸಿಎಂ ಯಡಿಯೂರಪ್ಪ ಹೆಚ್ಚು ದಿನಗಳ ಕಾಲ ಅಧಿಕಾರದಲ್ಲಿ ಇರುವುದಿಲ್ಲ ಎಂಬ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಹಲವು ಕಾರಣಕ್ಕೆ ಯತ್ನಾಳ್ ಅವರು ಆಗಾಗ ಈ ರೀತಿಯ ಹೇಳಿಕೆಗಳನ್ನು ಕೊಡುತ್ತಿರುತ್ತಾರೆ. ಅವರ ಹೇಳಿಕೆಗಳಿಗೆ ನಾನು ಹೆಚ್ಚಿನ ಪ್ರತಿಕ್ರಿಯೆ ಕೊಡಲ್ಲ‌. ಪಕ್ಷ ಯಾವ ಸಂದರ್ಭದಲ್ಲಿ ಏನೇನು ಶಿಸ್ತು ಕ್ರಮ ಕೈಗೊಳ್ಳಬೇಕೋ ಕೈಗೊಳ್ಳುತ್ತೆ‌. ಪಕ್ಷದ ಆಂತರಿಕ ವಿಚಾರಗಳನ್ನು ಸೂಕ್ತ ವೇದಿಕೆಯಲ್ಲಿ ಚರ್ಚಿಸಲಾಗುವುದು ಎಂದಿದ್ದಾರೆ.

CT Ravi

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPbjp leaderCT Ravipm narendra modi
ShareTweetSendShare
Join us on:

Related Posts

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

by Shwetha
May 6, 2026
0

ದೇಶದ ರಾಜಕೀಯದಲ್ಲಿ ಭಾರತೀಯ ಜನತಾ ಪಾರ್ಟಿ (BJP) ಮತ್ತೊಂದು ಮಹತ್ವದ ಸಾಧನೆ ದಾಖಲಿಸಿದೆ. ಪ್ರಸ್ತುತ, ಬಿಜೆಪಿ ದೇಶಾದ್ಯಂತ 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನೇರವಾಗಿ ಅಥವಾ...

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

by Shwetha
May 6, 2026
0

ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಹಿನ್ನೆಲೆ, ಮಮತಾ ಬ್ಯಾನರ್ಜಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಪಕ್ಷ ಟಿಎಂಸಿ ಯ ಸೋಲಿಗೆ ಚುನಾವಣಾ ಆಯೋಗವೇ ಕಾರಣ ಎಂದು ಅವರು...

ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಜೀವರಾಜ್ – ನನ್ನನ್ನು 3 ವರ್ಷ ವನವಾಸಕ್ಕೆ ಕಳಿಸಿದ್ರಿ, ಈಗ ಸವಾರಿ ಮಾಡ್ತೀರಾ?

ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಜೀವರಾಜ್ – ನನ್ನನ್ನು 3 ವರ್ಷ ವನವಾಸಕ್ಕೆ ಕಳಿಸಿದ್ರಿ, ಈಗ ಸವಾರಿ ಮಾಡ್ತೀರಾ?

by Shwetha
May 6, 2026
0

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಪ್ರಕ್ರಿಯೆಯು ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಕಿಚ್ಚು ಹಚ್ಚಿದೆ. ಮರುಎಣಿಕೆಯಲ್ಲಿ ಜೀವರಾಜ್ ಅಕ್ರಮ ಎಸಗಿದ್ದಾರೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ...

ತಮಿಳುನಾಡು ರಾಜಕೀಯದಲ್ಲಿ ವಿಜಯ್ ಭರವಸೆಗಳ ಅಬ್ಬರ: ಈಡೇರಿಸಲು ಬೇಕು ಬರೋಬ್ಬರಿ 42 ಸಾವಿರ ಕೋಟಿ ರೂಪಾಯಿಗಳ ಬೃಹತ್ ಮೊತ್ತ

ತಮಿಳುನಾಡು ರಾಜಕೀಯದಲ್ಲಿ ವಿಜಯ್ ಭರವಸೆಗಳ ಅಬ್ಬರ: ಈಡೇರಿಸಲು ಬೇಕು ಬರೋಬ್ಬರಿ 42 ಸಾವಿರ ಕೋಟಿ ರೂಪಾಯಿಗಳ ಬೃಹತ್ ಮೊತ್ತ

by Shwetha
May 6, 2026
0

ತಮಿಳುನಾಡಿನ ಜನಪ್ರಿಯ ನಟ ಮತ್ತು ತಮಿಳಗ ವೆಟ್ರಿ ಕಳಗಂ ಪಕ್ಷದ ನಾಯಕ ವಿಜಯ್ ಅವರು ಘೋಷಿಸಿರುವ ಜನಪ್ರಿಯ ಕಲ್ಯಾಣ ಯೋಜನೆಗಳು ಚುನಾವಣಾ ಕಣದಲ್ಲಿ ಸಂಚಲನ ಮೂಡಿಸಿರುವುದು ನಿಜ....

ಅಮೆರಿಕದ ವಿಮಾನ ಮಿಸ್ಸಿಂಗ್!

ಅಮೆರಿಕದ ವಿಮಾನ ಮಿಸ್ಸಿಂಗ್!

by Shwetha
May 6, 2026
0

ಅಮೆರಿಕದ ಭಾರೀ ಸೈನಿಕ ವಿಮಾನವಾದ KC-135 ಸ್ಟ್ರಾಟೋಟ್ಯಾಂಕರ್ ಪರ್ಷಿಯನ್ ಗಲ್ಫ್ ಪ್ರದೇಶದಲ್ಲಿ ಕಾಣೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ವಿಮಾನವು ಗಾಳಿಯಲ್ಲೇ ಇಂಧನ ತುಂಬುವ ಪ್ರಮುಖ ಕಾರ್ಯವನ್ನು ನಿರ್ವಹಿಸುವುದರಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram