ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗುತ್ತಿದ್ದಂತೆ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ, ಕ್ರೀಡಾ ಇಲಾಖೆ ಸಚಿವ ಸ್ಥಾನಕ್ಕೆ ಸಿ.ಟಿ ರವಿ ಕಳೆದ ತಿಂಗಳು ರಾಜೀನಾಮೆ ನೀಡಿದ್ದರು.
ಏಕಕಾಲಕ್ಕೆ ಸಚಿವ ಸ್ಥಾನ ಹಾಗೂ ಪಕ್ಷದ ಸಂಘಟನೆ ಎರಡೂ ಕೆಲಸ ನಿಭಾಯಿಸಲು ಸಾದ್ಯವಾಗದು. ಹೀಗಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿ.ಟಿ ರವಿ ಸಮರ್ಥಿಸಿಕೊಂಡಿದ್ದರು. ಆದರೆ, ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ಅಂಗೀಕರಿಸದೇ ಸಚಿವ ಸ್ಥಾನದಲ್ಲಿ ಮುಂದುವರೆಯಲು ಸಲಹೆ ನೀಡಿದ್ದರು.
ಆದರೆ, ಸರ್ಕಾರಿ ಕಾರು ಸೇರಿದಂತೆ ಸಚಿವರಿಗೆ ನೀಡಿದ್ದ ಎಲ್ಲಾ ಸವಲತ್ತುಗಳನ್ನು ಸಿ.ಟಿ ರವಿ ವಾಪಸ್ ನೀಡಿ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು. ಅಷ್ಟರಲ್ಲೇ ಆರ್.ಆರ್ ನಗರ ಹಾಗೂ ಶಿರಾ ಕ್ಷೇತ್ರದ ಉಪಚುನಾವಣೆ ಘೋಷಣೆಯಾಗದ ಹಿನ್ನೆಲೆಯಲ್ಲಿ ಸಿ.ಟಿ ರವಿ ಅವರ ರಾಜೀನಾಮೆ ಅಂಗೀಕಾರ ಮಾಡಿರಲಿಲ್ಲ.
ಇದೀಗ ಉಪಚುನಾವಣೆ ಮುಗಿದು ಫಲಿತಾಂಶ ಸನ್ನಿಹಿತವಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಅವರು ಸಿ.ಟಿ ರವಿ ಅವರ ರಾಜೀನಾಮೆ ಅಂಗೀಕರಿಸಿ ಶನಿವಾರ ರಾಜ್ಯಪಾಲರಿಗೆ ರವಾನಿಸಿದ್ದರು.
ಮುಖ್ಯಮಂತ್ರಿಗಳ ಶಿಫಾರಸಿನ ಹಿನ್ನೆಲೆಯಲ್ಲಿ ರಾಜ್ಯಪಾಲ ವಜುಭಾಯ್ ವಾಲಾ ಅವರು ರಾಜೀನಾಮೆ ಅಂಗೀಕರಿದ್ದು, ರಾಜ್ಯಪತ್ರದಲ್ಲಿ ಪ್ರಕಟವಾಗಿದೆ.
ದಿಲ್ಲಿಗೆ ತೆರಳಿದ ಸಿ.ಟಿ ರವಿ
ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಅಂಗೀಕಾರವಾಗುತ್ತಿದ್ದಂತೆ ಸಿ.ಟಿ ರವಿ ದೆಹಲಿಗೆ ತೆರಳಿದ್ದಾರೆ. ದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಿಸಿಕೊಳ್ಳಲು ಸಿ.ಟಿ ರವಿ ಮುಂದಾಗಿದ್ದಾರೆ.
ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಕೇರಳ ರಾಜ್ಯಗಳ ಉಸ್ತುವಾರಿಯನ್ನು ಸಿ.ಟಿ ರವಿ ಅವರಿಗೆ ನೀಡಲಾಗಿದೆ. ಇದರ ಬೆನ್ನಲ್ಲೇ ಕಳೆದ ತಿಂಗಳಷ್ಟೇ ತಮಿಳುನಾಡಿನಲ್ಲಿ ನಡೆದ ರಾಜಕೀಯ ಬೆಳವಣಿಗೆಯಲ್ಲಿ ನಟಿ ಖುಷ್ಬೂ ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದರು. ಖುಷ್ಬೂ ಕಾಂಗ್ರೆಸ್ಗೆ ಗುಡ್ಬೈ ಹೇಳುತ್ತಿದ್ದಂತೆ ಅವರನ್ನು ಬಿಜೆಪಿಯತ್ತ ಸೆಳೆದು ಪಕ್ಷಕ್ಕೆ ಸೇರ್ಪಡೆ ಮಾಡಿಕೊಡುವಲ್ಲಿ ಸಿ.ಟಿ ರವಿ ಪ್ರಮುಖ ಪಾತ್ರವಹಿಸಿದ್ದರು.
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ವಿಚಾರವಾಗಿ ತಮಗೆ ಮಂತ್ರಿ ಸ್ಥಾನಕ್ಕಿಂತ ಪಕ್ಷದ ಸಂಘಟನೆಯಲ್ಲಿ ಹೆಚ್ಚು ಆಸಕ್ತಿ ಎಂದು ಸಿ.ಟಿ ರವಿ ಹಲವು ಬಾರಿ ಹೇಳಿದ್ದಾರೆ. ಸಚಿವ ಸ್ಥಾನ ಪಕ್ಷದಲ್ಲಿ ತಾವು ಮಾಡಿದ ಶ್ರಮಕ್ಕೆ ಸಿಕ್ಕ ಫಲವಾಗಿದೆ. ತಾವು ಯಾವತ್ತೂ ಬಕೆಟ್ ಹಿಡಿದು ಸಚಿವ ಸ್ಥಾನ ಪಡೆದವನಲ್ಲ. ಹಾಗೆ ಮಾಡಿದ್ದರೆ 2012ಕ್ಕಿಂತ ಮೊದಲೇ ನಾನು ಸಚಿವನಾಗಬಹುದಿತ್ತು ಎಂದು ಸಮರ್ಥನೆ ಮಾಡಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel