ಅನಗತ್ಯ ಭಯ ಹುಟ್ಟಿಸುವ ಕೆಲಸ ಯಾರೂ ಮಾಡಬಾರದು : ನೈಟ್ ಕರ್ಫ್ಯೂ ಆದೇಶಕ್ಕೆ ಸಿ.ಟಿ.ರವಿ ಅಸಮಾಧಾನ CT Ravi saaksha tv
ಚಿಕ್ಕಮಗಳೂರು : ನ್ಯೂ ಇಯರ್ ಹಿನ್ನೆಲೆಯಲ್ಲಿ ಕೊರೊನಾಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಜಾರಿ ಮಾಡಿದೆ.
ಇದಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅಸಮಾಧಾನ ಹೊರಹಾಕಿದರು. CT Ravi saaksha tv
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ನಮ್ಮದೇ ಸರ್ಕಾರದ ಆದೇಶವನ್ನು ಸರಿ-ತಪ್ಪು ಎಂದು ವ್ಯಾಖ್ಯಾನ ಮಾಡೋಕಾಗಲ್ಲ.
ಒಮಿಕ್ರಾನ್ ಗೆ ಭಯಪಡಬೇಕಿಲ್ಲವೆಂದು ವಿಜ್ಞಾನಿಗಳೇ ಹೇಳಿದ್ದಾರೆ. ಮೂಗು ಇರುವವರಿಗೆ ನೆಗಡಿ ತಪ್ಪಲ್ಲ, ನೆಗಡಿ ಬಂದರೆ ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ ಎಂದು ಹೇಳಿದರು.
ಇನ್ನು ಸರ್ಕಾರ ಕೂಡ ಜನರನ್ನ ಅನಗತ್ಯ ಭಯಕ್ಕೆ ಒಳಪಡಿಸಬಾರದು ಎಂದು ತಮ್ಮದೇ ಸರ್ಕಾರದ ನಡೆಗೆ ಅಸಮಾಧಾನ ಹೊರಹಾಕಿದರು.
ಅಲ್ಲದೇ ಸದ್ಯ ಜನಜೀವನ ಸಹಜ ಸ್ಥಿತಿಯಲ್ಲಿದೆ, ಆದ್ರೆ ಎಚ್ಚರವಹಿಸಬೇಕು. ಅನಗತ್ಯ ಭಯ ಹುಟ್ಟಿಸುವ ಕೆಲಸವನ್ನು ಯಾರೂ ಮಾಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.