ಬೆಂಗಳೂರು: ವಿಪ ಸದಸ್ಯ ಸಿ.ಟಿ.ರವಿ (C.T.Ravi) ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮಧ್ಯಪ್ರವೇಶಿಸಬೇಕೆಂದು ಬಿಜೆಪಿ ಮನವಿ ಮಾಡಿದೆ.
ಇಂದು ಸಂಜೆ ರಾಜ್ಯಪಾಲರನ್ನು ಭೇಟಿ ಮಾಡಿರುವ ಬಿಜೆಪಿ ನಿಯೋಗವು ಸಿ.ಟಿ.ರವಿ ಬಂಧನ ಪ್ರಕರಣದಲ್ಲಿ ಸತ್ಯ ಶೋಧನೆ ನಡೆಸುವಂತೆ ಮನವಿ ಮಾಡಿದೆ. ಸಿ.ಟಿ. ರವಿ ಪ್ರಕರಣದಲ್ಲಿ ರಾಜ್ಯ ಸರ್ಕಾರ ನಡೆದುಕೊಂಡಿರುವ ರೀತಿ ಖಂಡನೀಯ. ಸಾಂವಿಧಾನಿಕ ಹಾಗೂ ಕಾನೂನು ಉಲ್ಲಂಘನೆ ಆಗಿದೆ. ಪೊಲೀಸ್ ಇಲಾಖೆ ಮೂಲಕ ಅಧಿಕಾರ ದುರ್ಬಳಕೆ ಆಗಿದೆ. ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶ ಸತ್ಯ ಶೋಧನೆ ನಡೆಸಬೇಕು ಎಂದು ಮನವಿ ಸಲ್ಲಿಸಲಾಗಿದೆ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸದನದಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆಂದು ಸಿ.ಟಿ. ರವಿ ಅವರನ್ನು ಪೊಲೀಸರು ಬಂಧಿಸಿದ್ದರು. ಆನಂತರ ಅಂದು ನಾಟಕೀಯ ಬೆಳವಣಿಗೆ ನಡೆದಿತ್ತು. ಪೊಲೀಸರ ವಿರುದ್ಧ ರವಿ ಆರೋಪಿಸಿದ್ದರು.








