ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ ಮತ್ತು ಫೋರಂ (Cubbon Park Walkers Association & Forum) ವತಿಯಿಂದ ಆಯೋಜಿಸಲಾದ ‘6ನೇ ಅಂತರರಾಷ್ಟ್ರೀಯ ಮಹಿಳಾ ಮತ್ತು ಯುವ ಸಾಧಕರ ಪ್ರಶಸ್ತಿ 2026’ ಪ್ರದಾನ ಸಮಾರಂಭವು ರವೀಂದ್ರ ಕಲಾಕ್ಷೇತ್ರದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು.
ಈ ಪ್ರತಿಷ್ಠಿತ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಶ್ರೀ ಆರ್. ಅಶೋಕ್ ಅವರು ಭಾಗವಹಿಸಿದ್ದರು. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಮಹಿಳೆಯರು ಹಾಗೂ ಯುವ ಸಾಧಕರಿಗೆ ಅವರು ವೇದಿಕೆಯ ಮೇಲೆ ಪ್ರಶಸ್ತಿಗಳನ್ನು ಪ್ರದಾನ ಮಾಡಿ, ಅಭಿನಂದಿಸಿದರು.
ಮಹಿಳೆಯರು ಮತ್ತು ಯುವಜನರ ನಿಸ್ವಾರ್ಥ ಸೇವೆ ಹಾಗೂ ಸಾಧನೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ ಈ ಸಮಾರಂಭವು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.
ಮುಖ್ಯಮಂತ್ರಿಗಳೇ, ಗಾಳಿಯಲ್ಲಿ ಗುಂಡು ಬೇಡ, ಕೂಡಲೇ ಎಫ್ಐಆರ್ ದಾಖಲಿಸಿ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ
ಬೆಂಗಳೂರು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸ್ಟಿಂಗ್ ಆಪರೇಶನ್ ಬಗ್ಗೆ ಗಾಳಿಯಲ್ಲಿ ಗುಂಡು ಹಾರಿಸುವ ಬದಲು ಎಫ್ಐಆರ್ ದಾಖಲಿಸಿ ತನಿಖೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ...








