CUET ಪರೀಕ್ಷೆ ಬರೆಯಲು ಸಾಧ್ಯವಾಗದೇ ಇದ್ದ ವಿದ್ಯಾರ್ಥಿಗಳಿಗೆ ಆಗಸ್ಟ್ನಲ್ಲಿ ನಡೆಯಲಿರುವ ಎರಡನೇ ಹಂತದ ಪರೀಕ್ಷೆಯಲ್ಲಿ ಮತ್ತೊಮ್ಮೆ ಅವಕಾಶ ನೀಡಲಾಗುವುದು ಎಂದು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.
ಪರೀಕ್ಷಾ ಕೇಂದ್ರದ ಬದಲಾವಣೆ ಕಾರಣದಿಂದ ವಿಶ್ವವಿದ್ಯಾಲಯ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಯುಇಟಿ–ಯುಜಿ) ಮೊದಲ ದಿನ ಗೈರಾದ ಅಭ್ಯರ್ಥಿಗಳಿಗೆ ಮರು ಅವಕಾಶ ನೀಡುವುದಾಗಿ ತಿಳಿಸಲಾಗಿದೆ..
ಪಶ್ಚಿಮ ಬಂಗಾಳದ ನವ ಜಲಪೈಗುರಿ ಮತ್ತು ಪಂಜಾಬಿನ ಪಠಾಣಕೋಟ್ನ ಎರಡು ಪರೀಕ್ಷಾ ಕೇಂದ್ರಗಳಲ್ಲಿ ತಾಂತ್ರಿಕ ಕಾರಣದಿಂದ ಪರೀಕ್ಷೆ ರದ್ದಾಗಿದೆ. ಈ ಪರೀಕ್ಷಾ ಕೇಂದ್ರಗಳ ಸುಮಾರು 190 ಅಭ್ಯರ್ಥಿಗಳು ಮತ್ತು ಪರೀಕ್ಷಾ ಕೇಂದ್ರಗಳ ಬದಲಾವಣೆಯ ಕಾರಣದಿಂದ ಪರೀಕ್ಷೆ ಬರೆಯಲು ಸಾಧ್ಯವಾಗದ ಇತರೆ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.