ಆಟೋ ಚಾಲಕನೊಬ್ಬ ತನ್ನ ಪತ್ನಿಯ ತಲೆ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಪತ್ನಿ ಬೇರೊಬ್ಬರ ಜತೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಸಂಶಯದಿಂದ ಆಕೆಯನ್ನು ಹತ್ಯೆ ಮಾಡಿ ಹರಿತವಾದ ಚಾಕುವಿನಿಂದ ತಲೆ ಕತ್ತರಿಸಿದ್ದಾನೆ ಎನ್ನಲಾಗಿದೆ.
ಸರ್ಕಾರಿ ವಸತಿ ಗೃಹದಲ್ಲಿ ವಾಸಿಸುತ್ತಿದ್ದ ವ್ಯಕ್ತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿದ್ದಾನೆ. 41 ವರ್ಷದ ಪತ್ನಿ ಪುಷ್ಪಲತಾಳನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ವಿಜಯ್ ನನ್ನು ಸದ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಯು ಪತ್ನಿಗೆ ಬೇರೊಬ್ಬರ ಜತೆ ಸಂಬಂಧವಿದೆ ಎಂದು ಶಂಕಿಸಿ ಪದೇ ಪದೇ ಕಿರುಕುಳ ನೀಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.