ಇಂದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹುಟ್ಟುಹಬ್ಬದ ಹಿನ್ನೆಲೆ ಕೋಟಿಗೊಬ್ಬ-3 ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಈ ಹಿಂದೆ ಬಿಡುಗಡೆಯಾಗಿದ್ದ ಫಸ್ಟ್ ಲುಕ್, ಟೀಸರ್ ಗೆ ಮಾಸ್ ಅಭಿಮಾನಿಗಳು ಫುಲ್ ಫಿದಾ ಆಗಿದ್ದರು. ಇದೀಗ ಬಿಡುಗಡೆ ಆಗಿರುವ ಟೀಸರ್ ನಲ್ಲಿ ಕಾಮಿಡಿ ಕಚಗುಳಿ ಝಲಕ್, ಕ್ಯೂಟ್ ಲವ್ ಸ್ಟೋರಿ ನೋಡಬಹುದಾಗಿದೆ.
ಕೋಟಿಗೊಬ್ಬ ಟೀಸರ್ ಬಿಡುಗಡೆ ಮಾಡುವ ಬಗ್ಗೆ ಎರಡು ದಿನದ ಮುಂಚೆಯೇ ಕೋಟಿಗೊಬ್ಬ ಚಿತ್ರತಂಡ ಮಾಹಿತಿ ನೀಡಿತ್ತು. ಚಿತ್ರದಲ್ಲಿ ಸುದೀಪ್ ಗೆ ಮಡೋನಾ ಸೆಬಾಸ್ಟಿಯನ್ ಮತ್ತು ಶ್ರದ್ಧಾ ಜೊತೆಯಾಗಿದ್ದಾರೆ. ಇದು ಸ್ಯಾಂಡಲ್ ವುಡ್ ನ ಬಹುನಿರೀಕ್ಷಿತ ಸಿನಿಮಾ ಆಗಿದ್ದು, ಶಿವಕಾರ್ತಿಕ್ ನಿರ್ದೇಶನ, ಸೂರಪ್ಪ ಬಾಬು ನಿರ್ಮಾಣದಲ್ಲಿ ಮೂಡಿ ಬರುತ್ತಿದೆ. ಮ್ಯೂಸಿಕಲ್ ಪೈಲ್ವಾನ್ ಅರ್ಜುನ್ ಜನ್ಯ ಸಂಗೀತ ಚಿತ್ರಕ್ಕಿದೆ. ಮೊದಲ ಬಾರಿ ಬಾಲಿವುಡ್ ನಟ ಅಫ್ತಾಬ್ ಕೋಟಿಗೊಬ್ಬ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ.








