ಟೀಂ ಇಂಡಿಯಾದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ, ಐಸಿಸಿ ಪ್ಲೇಯರ್ ಆಫ್ ದಿ ಮಂತ್ ಪ್ರಶಸ್ತಿ ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ತವರಿನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಜಸ್ಪ್ರೀತ್ ಬುಮ್ರಾ ಅತ್ಯುತ್ತಮ ಪ್ರದರ್ಶನ ನೀಡಿ ಮಿಂಚಿದ್ದಾರೆ. ಇದರ ಪರಿಣಾಮ ಇಂಟರ್ ನ್ಯಾಷಿನಲ್ ಕ್ರಿಕೆಟ್ ಕೌನ್ಸಿಲ್(ಐಸಿಸಿ) ನೀಡುವ ತಿಂಗಳ ಆಟಗಾರನ ಪ್ರಶಸ್ತಿಗೆ ಅಕ್ಟೋಬರ್ ತಿಂಗಳ ಪ್ರಶಸ್ತಿಗೆ ಬುಮ್ರಾ ಹೆಸರನ್ನ ಶಾರ್ಟ್ ಲಿಸ್ಟ್ ಮಾಡಲಾಗಿದೆ.
ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಜಸ್ಪ್ರೀತ್ ಬುಮ್ರಾ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಬುಮ್ರಾ ಅವರ ಈ ಅದ್ಭುತ ಪ್ರದರ್ಶನದ ನೆರವಿನಿಂದ ಟೀಂ ಇಂಡಿಯಾ ಕೂಡ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದು, ಆಡಿರುವ ಎಂಟು ಪಂದ್ಯಗಳಲ್ಲಿ ಗೆದ್ದು, ಅಜೇಯ ತಂಡವಾಗಿ ಗುರುತಿಸಿಕೊಂಡಿದೆ. ಮುಖ್ಯವಾಗಿ ಪ್ರಸಕ್ತ ವಿಶ್ವಕಪ್ನಲ್ಲಿ ಬುಮ್ರಾ ಅವರ ಪರಿಣಾಮಕಾರಿ ಬೌಲಿಂಗ್ನಿಂದ ಆಸ್ಟ್ರೇಲಿಯಾ, ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ತಂಡಗಳ ವಿರುದ್ಧದ ಗೆಲುವಿನಲ್ಲಿ ನಿರ್ಣಾಯಕ ಪಾತ್ರವಹಿಸಿದ್ದರು.ಪ್ರಸಕ್ತ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಮಿಂಚಿರುವ ಜಸ್ಪ್ರೀತ್ ಬುಮ್ರಾ, ಆಡಿರುವ 8 ಪಂದ್ಯಗಳಲ್ಲಿ 3.91ರ ಅದ್ಭುತ ಎಕಾನಮಿ, 15.07ರ ಸರಾಸರಿಯೊಂದಿಗೆ 14 ವಿಕೆಟ್ ಪಡೆದು ಹೆಚ್ಚು ವಿಕೆಟ್ ಪಡೆದ ಬೌಲರ್ಗಳ ರೇಸ್ನಲ್ಲಿ ಕಾಣಿಸಿಕೊಂಡಿದ್ದಾರೆ.
ಡಿಕಾಕ್-ರಚಿನ್ ಆಯ್ಕೆ:
ಟೀಂ ಇಂಡಿಯಾದ ವೇಗಿ ಜಸ್ಪ್ರೀತ್ ಬುಮ್ರಾ ಅವರೊಂದಿಗೆ ಏಕದಿನ ವಿಶ್ವಕಪ್ನಲ್ಲಿ ಭರ್ಜರಿ ಬ್ಯಾಟಿಂಗ್ನಿಂದ ಮಿಂಚುತ್ತಿರುವ ಸೌತ್ ಆಫ್ರಿಕಾ ತಂಡದ ಕ್ವಿಂಟನ್ ಡಿಕಾಕ್ ಹಾಗೂ ನ್ಯೂಜಿ಼ಲೆಂಡ್ನ ರಚಿನ್ ರವೀಂದ್ರ ಅವರು ಸಹ ಐಸಿಸಿ ಪ್ಲೇಯರ್ ಆಫ್ ದಿ ಮಂತ್ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡಿದ್ದಾರೆ.
ಸೌತ್ ಆಫ್ರಿಕಾದ ಆರಂಭಿಕ ಬ್ಯಾಟ್ಸ್ಮನ್ ಆಗಿರುವ ಡಿಕಾಕ್, ಸತತ ನಾಲ್ಕು ಸೆಂಚುರಿ ಬಾರಿಸಿ ಮಿಂಚಿದ್ದರೆ. ತಮ್ಮ ಕ್ರಿಕೆಟ್ ವೃತ್ತಿ ಜೀವನದ ಚೊಚ್ಚಲ ಏಕದಿನ ವಿಶ್ವಕಪ್ ಆಡುತ್ತಿರುವ ರಚಿನ್ ರವೀಂದ್ರ ಕೂಡ ಭರ್ಜರಿ ಬ್ಯಾಟಿಂಗ್ನಿಂದ ಗಮನ ಸೆಳೆದಿದ್ದಾರೆ.
CWC 2023, Team India, Jasprit Bumrah, ICC Award, World Cup