ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರಿಕೆಟ್

CWC 2023: ಕಿವೀಸ್‌ ಅಗ್ನಿಪರೀಕ್ಷೆ ಗೆದ್ದ ಭಾರತ: ರೋಹಿತ್‌ ಪಡೆಗೆ ಹೆಚ್ಚಿದ ಆತ್ಮವಿಶ್ವಾಸ

ಟೂರ್ನಿಯಲ್ಲಿ ಸತತ 5ನೇ ಗೆಲುವು ಸಾಧಿಸಿದ ಟೀಂ ಇಂಡಿಯಾ

C Dinesh by C Dinesh
October 23, 2023
in ಕ್ರಿಕೆಟ್, Sports, ಕ್ರಿಕೆಟ್ ವಿಶ್ವಕಪ್ 2023
Team India

Team India

Share on FacebookShare on TwitterShare on WhatsappShare on Telegram

ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ನ್ಯೂಜಿ಼ಲೆಂಡ್‌ ವಿರುದ್ಧದ ಪಂದ್ಯದಲ್ಲಿ ಎದುರಾದ ಮೊದಲ ಅಗ್ನಿಪರೀಕ್ಷೆಯಲ್ಲಿ ಜಯಭೇರಿ ಬಾರಿಸಿರುವ ಟೀಂ ಇಂಡಿಯಾ, ಇದೀಗ ವಿಶ್ವಕಪ್‌ ಗೆಲ್ಲುವ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ.

ತವರಿನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್‌ನಲ್ಲಿ ಸತತ ಗೆಲುವುಗಳ ಮೂಲಕ ಜಯದ ಅಲೆಯಲ್ಲಿ ತೇಲುತ್ತಿದ್ದ ಭಾರತ, ಧರ್ಮಶಾಲಾದಲ್ಲಿ ನ್ಯೂಜಿ಼ಲೆಂಡ್‌ ತಂಡದ ಸವಾಲು ಎದುರಿಸಿತು. ರೋಹಿತ್‌ ಪಡೆಯಂತೆ ಪ್ರಸಕ್ತ ಟೂರ್ನಿಯಲ್ಲಿ ನ್ಯೂಜಿ಼ಲೆಂಡ್‌ ಕೂಡ ಸೋಲು ಕಾಣದೆ ಅಜೇಯ ತಂಡವಾಗಿ ಮುನ್ನುಗ್ಗುತ್ತಿತ್ತು. ಹೀಗಾಗಿ ಟೂರ್ನಿಯ ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿದ್ದ ಕಿವೀಸ್‌ ಪಡೆಯನ್ನ ಸೋಲಿಸುವುದು ಭಾರತಕ್ಕೆ ಎದುರಾದ ಮೊದಲ ಅಗ್ನಿಪರೀಕ್ಷೆಯಾಗಿತ್ತು.

Related posts

anil-kumble-jumbo-fight-cricket-journey

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ ಬಂತು..?

August 10, 2026
indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

August 7, 2026

Virat Kohli

ಆದರೆ ನಿರೀಕ್ಷೆಯಂತೆ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಕಿವೀಸ್‌ ವಿರುದ್ಧ 4 ವಿಕೆಟ್‌ಗಳ ಗೆಲುವು ಸಾಧಿಸಿದ ಭಾರತ, ಆ ಮೂಲಕ ಪ್ರಸಕ್ತ ವಿಶ್ವಕಪ್‌ನಲ್ಲಿ ಎದುರಾದ ಮೊದಲ ಅಗ್ನಿಪರೀಕ್ಷೆಯಲ್ಲಿ ಗೆದ್ದು ತನ್ನ ಪ್ರಾಬಲ್ಯ ಮೆರೆದಿದೆ. ಈ ಗೆಲುವು ಭಾರತ ತಂಡದ ಆತ್ಮವಿಶ್ವಾಸವನ್ನ ಹೆಚ್ಚಿಸಿದ್ದು, ವಿಶ್ವಕಪ್‌ ಪ್ರಶಸ್ತಿ ಗೆಲ್ಲುವ ನಿಟ್ಟಿನಲ್ಲಿ ಟೀಂ ಇಂಡಿಯಾ ಆಟಗಾರರ ಆತ್ಮವಿಶ್ವಾಸ ಹೆಚ್ಚುವಂತೆ ಮಾಡಿದೆ.

Mohammed Shami

ಪ್ರಮುಖವಾಗಿ ಬೌಲಿಂಗ್‌ನಲ್ಲಿ ಈಗಾಗಲೇ ತನ್ನ ಸಾಮರ್ಥ್ಯ ಸಾಬೀತು ಮಾಡಿದ್ದ ಭಾರತದ ಬ್ಯಾಟಿಂಗ್‌ ಸಾಮರ್ಥ್ಯದ ಬಗ್ಗೆ ಹೆಚ್ಚಿನ ನಿರೀಕ್ಷೆ ಮೂಡಿಸಿತ್ತು. ಟೂರ್ನಿಯಲ್ಲಿ ನ್ಯೂಜಿ಼ಲೆಂಡ್‌ ವಿರುದ್ಧದ ಪಂದ್ಯಕ್ಕೂ ಮುನ್ನ ಆಡಿದ್ದ ಎಲ್ಲಾ ನಾಲ್ಕು ಪಂದ್ಯಗಳಲ್ಲೂ ಭಾರತ ಚೇಸಿಂಗ್‌ನಲ್ಲಿ ಯಶಸ್ಸು ಕಂಡಿತ್ತು. ಆದರೆ ಹೆಚ್ಚಾಗಿ 4 ಅಥವಾ 5ನೇ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳೇ ತಂಡಕ್ಕೆ ಗೆಲುವು ತಂದುಕೊಡುತ್ತಿದ್ದ ಪರಿಣಾಮ ನಂತರದ ಕ್ರಮಾಂಕದಲ್ಲಿನ ಬ್ಯಾಟರ್‌ಗಳಿಗೆ ತಮ್ಮ ಸಾಮರ್ಥ್ಯ ಏನು? ಎಂಬುದನ್ನ ತೋರಿಸುವ ಅವಕಾಶ ಸಿಕ್ಕಿರಲಿಲ್ಲ.

Ravindra Jadeja

ಹೀಗಾಗಿ ನ್ಯೂಜಿ಼ಲೆಂಡ್‌ ತಂಡದ ಬಲಿಷ್ಠ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ಪಡೆಯನ್ನ ಭಾರತದ ಆಟಗಾರರು ಯಾವ ರೀತಿ ಎದುರಿಸುತ್ತಾರೆ ಎಂಬ ಕುತೂಹಲ ಕ್ರಿಕೆಟ್‌ ಅಭಿಮಾನಿಗಳನ್ನ ಕೆರಳಿಸಿತ್ತು. ಆದರೆ ನಿರೀಕ್ಷೆಯಂತೆ ಬೌಲಿಂಗ್‌ನಲ್ಲಿ ಮಿಂಚಿದ ಭಾರತೀಯ ಬೌಲರ್‌ಗಳು ಕಿವೀಸ್‌ ಪಡೆಯನ್ನ 273 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾದರು. ಜಸ್ಪ್ರೀತ್‌ ಬುಮ್ರಾ, ಮೊಹಮ್ಮದ್‌ ಸಿರಾಜ್‌ ಜೊತೆಗೆ ಟೂರ್ನಿಯಲ್ಲಿ ಮೊದಲ ಪಂದ್ಯದಲ್ಲಿ ಆಡುವ ಅವಕಾಶ ಪಡೆದ ಮೊಹಮ್ಮದ್‌ ಶಮಿ ಕೂಡ ತಮ್ಮ ಸಾಮರ್ಥ್ಯ ಏನೆಂಬುದನ್ನ ಸಾಬೀತುಪಡಿಸಿದರು.

Team India

ಇನ್ನೂ ಬ್ಯಾಟಿಂಗ್‌ ವಿಭಾಗದಲ್ಲಿ ಟಾಪ್‌-5 ಬ್ಯಾಟರ್‌ಗಳಾದ ರೋಹಿತ್‌ ಶರ್ಮಾ, ಶುಭ್ಮನ್‌ ಗಿಲ್‌, ವಿರಾಟ್‌ ಕೊಹ್ಲಿ, ಶ್ರೇಯಸ್‌ ಅಯ್ಯರ್‌ ಹಾಗೂ ಕೆಎಲ್‌ ರಾಹುಲ್‌ ತಮ್ಮ ಮೇಲಿನ ನಿರೀಕ್ಷೆಗೆ ತಕ್ಕಂತೆ ಆಡಿದರೆ. ನಂತರ ಕಣಕ್ಕಿಳಿದ ಸೂರ್ಯಕುಮಾರ್‌ ಅನಿರೀಕ್ಷಿತ ರನೌಟ್‌ಗೆ ಬಲಿಯಾದರು. ರವೀಂದ್ರ ಜಡೇಜಾ ಜವಾಬ್ದಾರಿಯುತ ಆಟವಾಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಅಲ್ಲದೇ ಆಲ್ರೌಂಡರ್‌ ಹಾರ್ದಿಕ್‌ ಪಾಂಡ್ಯ ಅನುಪಸ್ಥಿತಿಯ ಆತಂಕದ ನಡುವೆಯೂ ಭಾರತದ ಆಟಗಾರರು ತಮ್ಮ ಜವಾಬ್ದಾರಿಗೆ ತಕ್ಕಂತೆ ಆಟವಾಡಿದ್ದು, ಕಿವೀಸ್‌ ವಿರುದ್ಧದ ಪಂದ್ಯದಲ್ಲಿ ಗೆಲುವು ಲಭಿಸಲು ಕಾರಣವಾಯಿತು. ನ್ಯೂಜಿ಼ಲೆಂಡ್‌ ವಿರುದ್ಧ ದೊರೆತ 4 ವಿಕೆಟ್‌ಗಳ ಜಯ ಭಾರತ ತಂಡದ ಆತ್ಮವಿಶ್ವಾಸ ಹೆಚ್ಚಿಸಿದ್ದರು, ವಿಶ್ವಕಪ್‌ ಪ್ರಶಸ್ತಿ ಗೆಲ್ಲಲ್ಲು ಮುಂಬರುವ ಪಂದ್ಯಗಳಲ್ಲಿ ಮತ್ತಷ್ಟು ಕಠಿಣ ಪರೀಕ್ಷೆ ಎದುರಾಗಲಿದೆ. ಹೀಗಾಗಿ ಟೀಂ ಇಂಡಿಯಾ ಆಟಗಾರರು ಇದೇ ಆತ್ಮವಿಶ್ವಾಸದೊಂದಿಗೆ ಆಡುವ ಮೂಲಕ ಪ್ರಶಸ್ತಿ ಗೆಲ್ಲಲಿ ಎಂಬುದು ಕೋಟ್ಯಾಂತರ ಅಭಿಮಾನಿಗಳ ಆಶಯ.

CWC 2023, IND v NZ, Team India, World Cup, ODI Cricket

Tags: CWC 2023IND v NZODI cricketteam indiaWorld Cup
ShareTweetSendShare
Join us on:

Related Posts

anil-kumble-jumbo-fight-cricket-journey

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ ಬಂತು..?

by admin
August 10, 2026
0

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ...

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

by admin
August 4, 2026
0

ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram