ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ(95) ನ್ಯೂಜಿ಼ಲೆಂಡ್ ವಿರುದ್ಧದ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಮೂಲಕ ತಂಡದ ಗೆಲುವಿನ ಹೀರೋ ಆಗಿ ಮಿಂಚಿದರು.
ಧರ್ಮಶಾಲಾದಲ್ಲಿ ನಡೆದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ನ ಮೂಲಕ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ 5ನೇ ಗೆಲುವು ಸಾಧಿಸುವಲ್ಲಿ ಕೊಹ್ಲಿ ಪ್ರಮುಖ ಪಾತ್ರವಹಿಸಿದರು. ಈ ಪ್ರದರ್ಶನದ ಮೂಲಕ ಐಸಿಸಿ ಪಂದ್ಯಾವಳಿಗಳಲ್ಲಿ ಚೇಸ್ ಮಾಸ್ಟರ್ನ 3000 ರನ್ಗಳನ್ನ ಪೂರೈಸಿದ ಸಾಧನೆ ಮಾಡಿದರು. ಅಲ್ಲದೇ ವೆಸ್ಟ್ ಇಂಡೀಸ್ನ ದೈತ್ಯ ಬ್ಯಾಟ್ಸ್ಮನ್ ಕ್ರಿಸ್ ಗೇಯ್ಲ್ ಅವರ ದಾಖಲೆಯನ್ನ ಸಹ ಹಿಂದಿಕ್ಕಿದರು.
ವಿಂಡೀಸ್ ಪಡೆಯ ದಿಗ್ಗಜ ಬ್ಯಾಟರ್ ಆಗಿದ್ದ ಕ್ರಿಸ್ ಗೇಯ್ಲ್, ಐಸಿಸಿ ಪಂದ್ಯಾವಳಿಗಳಲ್ಲಿ 2942 ರನ್ಗಳಿಸಿ ದಾಖಲೆ ಬರೆದಿದ್ದರು. ಆದರೆ ಟೀಂ ಇಂಡಿಯಾದ ರನ್ ಮಷಿನ್ ವಿರಾಟ್ ಕೊಹ್ಲಿ, ಇದೀಗ ಈ ಸಾಧನೆಯನ್ನ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಇದಲ್ಲದೇ ಏಕದಿನ ಕ್ರಿಕೆಟ್ನಲ್ಲಿ ಹೆಚ್ಚು ರನ್ಗಳಿಸಿದ ಬ್ಯಾಟರ್ಗಳ ಲಿಸ್ಟ್ನಲ್ಲಿ ಶ್ರೀಲಂಕಾದ ಮಾಜಿ ಆಟಗಾರ ಸನತ್ ಜಯಸೂರ್ಯ ಅವರ ದಾಖಲೆ ಮುರಿದರು.
ತವರಿನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ನಲ್ಲಿ ಅತ್ಯುತ್ತಮ ಬ್ಯಾಟಿಂಗ್ ಫಾರ್ಮ್ ಹೊಂದಿರುವ ವಿರಾಟ್ ಕೊಹ್ಲಿ, ಆಡಿರುವ ಐದು ಪಂದ್ಯಗಳಲ್ಲಿ ಒಂದು ಶತಕ ಹಾಗೂ 3 ಅರ್ಧಶತಕದ ನೆರವಿನೊಂದಿಗೆ 354 ರನ್ಗಳನ್ನ ಬಾರಿಸುವ ಮೂಲಕ ಹೆಚ್ಚು ರನ್ಗಳಿಸಿದ ಬ್ಯಾಟ್ಸ್ಮನ್ ಎನಿಸಿದ್ದಾರೆ.
CWC 2023, Team India, Virat Kohli, ODI Cricket, World Cup