ರಾಜ್ಯದಲ್ಲಿ ಇನ್ನೂ 3 ದಿನ ಸೈಕ್ಲೋನ್, ಆಂಧ್ರ ಒಡಿಶಾಗೆ ಅಪ್ಪಳಿಸಲಿದೆ ಚಂಡಮಾರುತ..
ದಕ್ಷಿಣ ಅಂಡಮಾನ್ ಸಮುದ್ರದ ಮೇಲಿನ ವಾಯುಭಾರ ಕುಸಿತದಿಂದಾಗಿ ಈಗ ಸುರಿಯುತ್ತಿರುವ ಮಳೆ ವಾತಾವರಣ ಭಾನುವಾರದ ವೇಳೆಗೆ ಚಂಡಮಾರುತವಾಗಿ ಬದಲಾಗಲಿದೆ. ಚಂಡಮಾರುತ್ತಕ್ಕೆ ಅಸಾನಿ ಎಂದು ಹೆಸರಿಡಲಾಗಿದೆ, ಅಸಾನಿ ಎಂದರೆ ಸಿಂಹಳಿ ಭಾಷೆಯಲ್ಲಿ ಕ್ರೋಧ ಎಂದರ್ಥ.
ಕರ್ನಾಟಕದಲ್ಲಿ ಇಂದು ಮಧ್ಯಾಹ್ನದಿಂದಲೇ ಸೈಕ್ಲೋನ್ ಎಫೆಕ್ಟ್ ಕಾಣಿಸಿಕೊಳ್ಳಲಿದೆ. ಸೈಕ್ಲೋನ್ ಉತ್ತರಕ್ಕೆ ಭಾರತದ ಪೂರ್ವ ಕರಾವಳಿಯತ್ತ ಚಲಿಸಬಹುದು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ
ಮೇ 10 ರ ವೇಳೆಗೆ ಉತ್ತರ-ವಾಯುವ್ಯ ಮತ್ತು ಕರಾವಳಿ ಆಂಧ್ರ ಪ್ರದೇಶ ಮತ್ತು ಒಡಿಶಾದ ಬಳಿ ಚಂಡಮಾರುತ ಮುಂದುವರಿಯುವ ನಿರೀಕ್ಷೆಯಿದೆ. ಅಸಾನಿಯು ಮೇ 10 ಮತ್ತು 11 ರ ನಡುವೆ ವಿಶಾಖಪಟ್ಟಣ ಮತ್ತು ಭುವನೇಶ್ವರ್ ನಡುವೆ ಸುರಿಯುವ ಸಾಧ್ಯತೆ ಇದೆ. ಚಂಡಮಾರುತದ ವೇಗ ಹೆಚ್ಚಾಗಿರುವ ಕಾರಣ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಕರ್ನಾಟಕದ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ, ಕೊಡಗು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಇಂದು ಸಹ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಮಾನ ಇಲಾಖೆ ಎಚ್ಚರಿಸಿದೆ.