ಬಂಗಾಳಕೊಲ್ಲಿಯಲ್ಲಿ ಉಂಟಾದ ಫಂಗಲ್ ಚಂಡಮಾರುತ ಪ್ರಭಾವದಿಂದ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಚಂಡಮಾರುತವು ಇಂದು ಕಾರೈಕಲ್ (ಪುದುಚೇರಿ) ಮತ್ತು ಮಹಾಬಲಿಪುರಂ (ತಮಿಳುನಾಡು) ಕರಾವಳಿಗೆ ಅಪ್ಪಳಿಸುವ ನಿರೀಕ್ಷೆಯಿದೆ.
ಅದರ ಪರಿಣಾಮವಾಗಿ ತಮಿಳುನಾಡು, ಪುದುಚೇರಿ, ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಮತ್ತು ಅಂಡಮಾನ್-ನಿಕೋಬಾರ್ ದ್ವೀಪಗಳಲ್ಲಿ ಬಲವಾದ ಗಾಳಿ ಮತ್ತು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಸಂಬಂಧಿಸಿದ ರಾಜ್ಯ ಸರ್ಕಾರಗಳು ಮತ್ತು ಹವಾಮಾನ ಇಲಾಖೆ ಹೆಚ್ಚಿನ ಮುನ್ನೆಚ್ಚರಿಕೆ ಕೈಗೊಂಡಿದ್ದು, ಎಲ್ಲಾ ರಾಜ್ಯಗಳಲ್ಲಿ ಅಲರ್ಟ್ ಘೋಷಿಸಲಾಗಿದೆ.
ಸುರಕ್ಷತೆಯ ದೃಷ್ಟಿಯಿಂದ ಕರಾವಳಿ ಪ್ರದೇಶದ ಜನರು ಅಗತ್ಯವಿಲ್ಲದೆ ಹೊರಗಡೆ ಹೋಗದಂತೆ ತಿಳಿಸಲಾಗಿದೆ ಮತ್ತು ಮೀನುಗಾರಿಕೆಗೆ ಹೋಗುವುದನ್ನು ತಾತ್ಕಾಲಿಕವಾಗಿ ನಿಲ್ಲಿಸಲು ಸೂಚಿಸಲಾಗಿದೆ.