Cyclone Mandus -ಮ್ಯಾಂಡಸ್ ಚಂಡಮಾರುತ ಅಬ್ಬರ ಉಂಟಾಗಿದ್ದು ತಮಿಳುನಾಡು, ಪುದುಚೇರಿ, ಆಂಧ್ರಪ್ರದೇಶದ ಕರಾವಳಿಯಲ್ಲಿ ಮ್ಯಾಂಡಸ್ ನಲ್ಲಿ ಮೀನುಗಾರರು ಮತ್ತು ಪ್ರವಾಸಿಗರಿಗೆ ಕಡಲತೀರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ
ಇಂದಿನಿಂದ ನಾಲ್ಕು ದಿನಗಳಕಾಲ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಯಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ 24 ಗಂಟೆ ಮಳೆಯಾಗುವ ಸಾಧ್ಯತೆ ಇದೆ.
ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳು ಭಾರೀ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ತಿಳಿಸಿದೆ
65- 75 ಕಿಮೀ ವೇಗದಲ್ಲಿ ಮಧ್ಯರಾತ್ರಿಯಿಂದ ನಾಳೆಯವರೆಗೆ ನಿರಂತರ ಗಾಳಿಯ ವಾತಾವರಣ ಇರಲಿದ್ದು 26 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ತಲಪುವ ಸಾಧ್ಯತೆ ಕಂಡು ಬಂದಿದೆ
ಇನ್ನೂ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದೆ ಹಾಗೂ ಶೀತಗಾಳಿ ಬೀಸುತ್ತಿದೆ. ಮಲೆನಾಡು ಭಾಗದಲ್ಲಿಯೂ ಜೋರು ಮಳೆಯಾಗುವ ಸಾಧ್ಯತೆಗಳಿವೆ. ಜೊತೆಗೆ ಉತ್ತರ ಒಳನಾಡಿನಲ್ಲೂ ಮಳೆಯಾಗುವ ಸಾಧ್ಯತೆಗಳಿವೆ








