ಬೆಂಗಳೂರು: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 5 ಮನೆಗಳಿಗೆ ಹಾನಿಯಾಗಿ, 6 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಈ ಘಟನೆ ಸಿಲಿಕಾನ್ ಸಿಟಿಯ ಯಲಹಂಕದ (Yelahanka) ಎಲ್ಬಿಎಸ್ ಲೇಔಟ್ನ ಮನೆಯೊಂದರಲ್ಲಿ ನಡೆದಿದೆ. ಗಾಯಾಳುಗಳಲ್ಲಿ ಇಬ್ಬರು ಸಾವು- ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಯಲಹಂಕದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಯಲಹಂಕ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








