ಬೆಳಗಾವಿ: ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಒಂದೇ ಕುಟುಂಬದ 7 ಜನ ಗಂಭೀರವಾಗಿ ಗಾಯಗಂಡಿರುವ ಘಟನೆ ನಡೆದಿದೆ.
ಈ ಘಟನೆ ಗೋಕಾಕ್ ತಾಲೂಕಿನ ಅಕ್ಕತಂಗೇರಾಹಳ ಗ್ರಾಮದಲ್ಲಿ ನಡೆದಿದೆ. ರಾತ್ರಿ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, 9 ತಿಂಗಳ ಮಗು ಸೇರಿದಂತೆ 7 ಜನರು ಗಂಭೀರವಾಗಿದ್ದಾರೆ. ಮನೆಯವರು ಮಲಗಿದ್ದ ಸಂದರ್ಭದಲ್ಲಿ ಸಿಲಿಂಡರ್ ಗ್ಯಾಸ್ (Gas) ಸೋರಿಕೆಯಾಗಿತ್ತು. ವಾಸನೆ ಬರುತ್ತಿದ್ದಂತೆ ಮೊಬೈಲ್ ಟಾರ್ಚ್ ಆನ್ ಮಾಡಿ ನೋಡಲು ಮುಂದಾಗಿದ್ದ ಸಂದರ್ಭದಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ರಭಸಕ್ಕೆ ಮನೆಯ ಹಂಚು ಹಾರಿದೆ.
ಘಟನೆಯಲ್ಲಿ ರಾಜಶ್ರೀ ನಿರ್ವಾಣಿ (42), ಅಶೋಕ ನಿರ್ವಾಣಿ (45), ಸೋಮನಗೌಡ (44), ದೀಪಾ (42), ನವೀನ (14), ವಿದ್ಯಾ (13), ಬಸನಗೌಡ ನಿರ್ವಾಣಿ (9 ತಿಂಗಳು) ಗಾಯಗೊಂಡಿದ್ದಾರೆ. ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಗಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.