ADVERTISEMENT
Sunday, January 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ವಿಂಬಲ್ಡನ್ ಮಹಿಳಾ ಸಿಂಗಲ್ಸ್ ಗೆದ್ದ ಜೆಕ್ ಗಣರಾಜ್ಯದ ಬಾರ್ಬೊರಾ

ಭರ್ಜರಿ ಜಯ ಸಾಧಿಸಿದ ಆಟಗಾರ್ತಿ

Author2 by Author2
July 13, 2024
in Sports, ಕ್ರೀಡೆ
Share on FacebookShare on TwitterShare on WhatsappShare on Telegram

ವಿಂಬಲ್ಡನ್‌ ಮಹಿಳಾ ಸಿಂಗಲ್ಸ್ ಟ್ರೋಫಿಗೆ ಜೆಕ್ ಗಣರಾಜ್ಯದ ಬಾರ್ಬೊರಾ ಕ್ರೆಜ್ಸಿಕೋವಾ ಮುತ್ತಿಕ್ಕಿದ್ದಾರೆ.

ಇಟಲಿಯ ಜಾಸ್ಮಿನ್ ಪಾವೊಲಿನಿ ಅವರನ್ನು 6-2, 2-6, 6-4 ಸೆಟ್‌ ಗಳಿಂದ ಸೋಲಿಸಿದ ಜೆಕ್ ಗಣರಾಜ್ಯದ ಬಾರ್ಬೊರಾ ಕ್ರೆಜ್ಸಿಕೋವಾ ಚೊಚ್ಚಲ ವಿಂಬಲ್ಡನ್ ಪ್ರಶಸ್ತಿ ಗೆದ್ದುಕೊಂಡಿದ್ದಾರೆ. ಈ ಮೂಲಕ ಕ್ರೆಜ್ಸಿಕೋವಾ ವಿಂಬಲ್ಡನ್‌ನಲ್ಲಿ ಮಹಿಳಾ ಪ್ರಶಸ್ತಿಯನ್ನು ಗೆದ್ದ ಜೆಕ್ ಗಣರಾಜ್ಯದ ನಾಲ್ಕನೇ ಆಟಗಾರ್ತಿ ಎನಿಸಿಕೊಂಡಿದ್ದಾರೆ. ಈ ಮೊದಲು ಯಾನಾ ನೊವೊಟ್ನಾ, ಪೆಟ್ರಾ ಕ್ವಿಟೋವಾ ಮತ್ತು ಕಳೆದ ವರ್ಷದ ಚಾಂಪಿಯನ್ ಮಾರ್ಕೆಟಾ ವೊಂಡ್ರೊಸೊವಾ ಪ್ರಶಸ್ತಿ ಗೆದ್ದಿದ್ದರು. ಕ್ರೆಜ್ಸಿಕೋವಾ ಈಗ ಸಿಂಗಲ್ಸ್ ಮತ್ತು ಡಬಲ್ಸ್ ಎರಡರಲ್ಲೂ ವಿಂಬಲ್ಡನ್ ಚಾಂಪಿಯನ್ ಆಗಿದ್ದಾರೆ.

Related posts

RCB ಫ್ಯಾನ್ಸ್‌ಗೆ ಬಿಗ್ ನ್ಯೂಸ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳು

RCB ಫ್ಯಾನ್ಸ್‌ಗೆ ಬಿಗ್ ನ್ಯೂಸ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳು

January 22, 2026
ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

January 21, 2026

ಮೊದಲ ಗ್ರ್ಯಾಂಡ್ಸ್ಲಾಮ್ ಸಿಂಗಲ್ಸ್ ಪ್ರಶಸ್ತಿ ಗೆದ್ದ ಮೊದಲ ಇಟಾಲಿಯನ್ ಎಂಬ ದಾಖಲೆ ನಿರ್ಮಿಸುವಲ್ಲಿ ಪಾವೊಲಿನಿ ಎಡವಿದ್ದಾರೆ. ಇದಕ್ಕೂ ಮುನ್ನ ಫ್ರೆಂಚ್ ಓಪನ್ ಫೈನಲ್‌ ನಲ್ಲಿ ಪಾವೊಲಿನಿ ವಿಶ್ವದ ನಂಬರ್ ಒನ್ ಆಟಗಾರ್ತಿ ಇಗಾ ಸ್ವಿಯಾಟೆಕ್ ವಿರುದ್ಧ ಸೋತಿದ್ದರು. ಈಗ ವಿಂಬಲ್ಡನ್‌ ಫೈನಲ್ ಪಂದ್ಯದಲ್ಲಿ ಕ್ರೆಜ್ಸಿಕೋವಾ ವಿರುದ್ಧ ಕಠಿಣ ಹೋರಾಟ ನೀಡಿ ಸೋತಿದ್ದಾರೆ. ಆದರೂ ಪಾವೊಲಿನಿ ವಿಂಬಲ್ಡನ್ ಫೈನಲ್ ತಲುಪಿದ ಮೊದಲ ಇಟಾಲಿಯನ್ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಒಂದು ಗಂಟೆ 56 ನಿಮಿಷಗಳ ಕಾಲ ನಡೆದ ಈ ಪಂದ್ಯದಲ್ಲಿ ಕ್ರೆಜ್ಸಿಕೋವಾ ಮೊದಲ ಸೆಟ್ ಗೆದ್ದರು. ನಂತರ ಜಾಸ್ಮಿನ್ ಬಲವಾದ ಪುನರಾಗಮನ ಮಾಡಿ ಪಂದ್ಯವನ್ನು ನಿರ್ಣಾಯಕ ಸೆಟ್‌ ಗೆ ಕೊಂಡೊಯ್ದರು. ಮೂರನೇ ಹಾಗೂ ಕೊನೆಯ ಸೆಟ್‌ನಲ್ಲಿ ಕ್ರೆಜ್ಸಿಕೋವಾ ದಿಟ್ಟ ಪ್ರದರ್ಶನ ನೀಡಿ, ಟ್ರೋಫಿಗೆ ಮುತ್ತಿಕ್ಕಿದರು. ಇದಕ್ಕೂ ಮುನ್ನ ಅವರು 2021ರಲ್ಲಿ ಫ್ರೆಂಚ್ ಓಪನ್ ಪ್ರಶಸ್ತಿ ಗೆದ್ದಿದ್ದರು. ಇತ್ತ ಎರಡನೇ ಬಾರಿಗೆ ಗ್ರ್ಯಾಂಡ್ ಸ್ಲಾಮ್ ಫೈನಲ್ ತಲುಪಿದ್ದ ಜಾಸ್ಮಿನ್ ಈ ಬಾರಿಯೂ ಗೆಲುವು ಸಾಧಿಸಿದ್ದಾರೆ.

Tags: Czech Republic's Barbora wins Wimbledon women's singles
ShareTweetSendShare
Join us on:

Related Posts

RCB ಫ್ಯಾನ್ಸ್‌ಗೆ ಬಿಗ್ ನ್ಯೂಸ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳು

RCB ಫ್ಯಾನ್ಸ್‌ಗೆ ಬಿಗ್ ನ್ಯೂಸ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳು

by Shwetha
January 22, 2026
0

IPL ಪಂದ್ಯಗಳು ತಮ್ಮ ತವರು ನೆಲವಾದ ಬೆಂಗಳೂರಿನಲ್ಲೇ ನಡೆಯಬೇಕೆಂದು ಬಹುಕಾಲದಿಂದ ಕಾಯುತ್ತಿದ್ದ RCB ಅಭಿಮಾನಿಗಳಿಗೆ ಕೊನೆಗೂ ಸಿಹಿಸುದ್ದಿ ದೊರೆತಿದೆ. ಬೆಂಗಳೂರಿನ ಐಕಾನಿಕ್ ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳನ್ನು...

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

by Shwetha
January 21, 2026
0

2026ರ ಮಹಿಳಾ ಪ್ರೀಮಿಯರ್ ಲೀಗ್‌ (WPL)ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಗೆಲುವಿನ ಸರಣಿ ಮುಂದುವರೆದಿದೆ. ಸ್ಮೃತಿ ಮಂಧಾನ ಅವರ ನಾಯಕತ್ವದಲ್ಲಿ ಆಡುತ್ತಿರುವ RCB ಈವರೆಗೆ...

ಭಾರತದಲ್ಲಿ ಆಡುವುದಿಲ್ಲ ಎಂದ ಬಾಂಗ್ಲಾದೇಶ – ICCಗೆ ಮತ್ತೊಮ್ಮೆ ಸ್ಪಷ್ಟನೆ

ಭಾರತದಲ್ಲಿ ಆಡುವುದಿಲ್ಲ ಎಂದ ಬಾಂಗ್ಲಾದೇಶ – ICCಗೆ ಮತ್ತೊಮ್ಮೆ ಸ್ಪಷ್ಟನೆ

by Shwetha
January 14, 2026
0

ಟಿ20 ವಿಶ್ವಕಪ್ ಪಂದ್ಯಗಳನ್ನು ಭಾರತದಲ್ಲಿ ಆಡುವುದಿಲ್ಲ ಎಂಬ ತನ್ನ ನಿಲುವನ್ನು ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್ (BCB) ಮತ್ತೊಮ್ಮೆ ಸ್ಪಷ್ಟವಾಗಿ ತಿಳಿಸಿದೆ. ಆಟಗಾರರ ಸುರಕ್ಷತೆ ಪ್ರಮುಖ ಕಾರಣವಾಗಿದ್ದು, ಪಂದ್ಯಗಳನ್ನು...

ಕೆಕೆಆರ್ ಕೈಬಿಟ್ಟ ಆಟಗಾರನಿಗೆ ಪಾಕಿಸ್ತಾನವೇ ಗತಿ ಐಪಿಎಲ್ ನಿಂದ ಔಟ್ ಪಿಎಸ್ಎಲ್ ಗೆ ಇನ್ ಆದ ಮುಸ್ತಫಿಝುರ್ ರೆಹಮಾನ್

ಕೆಕೆಆರ್ ಕೈಬಿಟ್ಟ ಆಟಗಾರನಿಗೆ ಪಾಕಿಸ್ತಾನವೇ ಗತಿ ಐಪಿಎಲ್ ನಿಂದ ಔಟ್ ಪಿಎಸ್ಎಲ್ ಗೆ ಇನ್ ಆದ ಮುಸ್ತಫಿಝುರ್ ರೆಹಮಾನ್

by Shwetha
January 8, 2026
0

ಬಾಂಗ್ಲಾದೇಶದ ಸ್ಟಾರ್ ವೇಗಿ ಮುಸ್ತಫಿಝುರ್ ರೆಹಮಾನ್ ಅವರ ಐಪಿಎಲ್ ಪ್ರಯಾಣಕ್ಕೆ ಬ್ರೇಕ್ ಬಿದ್ದಿದೆ. ಭಾರತದ ಶ್ರೀಮಂತ ಲೀಗ್ ಇಂಡಿಯನ್ ಪ್ರೀಮಿಯರ್ ಲೀಗ್ ನಿಂದ ಹೊರಬಿದ್ದ ಕೆಲವೇ ಗಂಟೆಗಳಲ್ಲಿ...

ಆಯ್ಕೆ ಸಮಿತಿಗೆ ನಾಚಿಕೆಯಾಗಬೇಕು ಮೊಹಮ್ಮದ್ ಶಮಿಗೆ ಅನ್ಯಾಯವಾಗುತ್ತಿದೆ ಎಂದು ಗುಡುಗಿದ ಹೆಡ್‌ ಕೋಚ್

ಆಯ್ಕೆ ಸಮಿತಿಗೆ ನಾಚಿಕೆಯಾಗಬೇಕು ಮೊಹಮ್ಮದ್ ಶಮಿಗೆ ಅನ್ಯಾಯವಾಗುತ್ತಿದೆ ಎಂದು ಗುಡುಗಿದ ಹೆಡ್‌ ಕೋಚ್

by Shwetha
January 5, 2026
0

ಮುಂಬೈ: ಟೀಂ ಇಂಡಿಯಾದ ಹಿರಿಯ ವೇಗಿ, ಸ್ವಿಂಗ್ ಮಾಂತ್ರಿಕ ಮೊಹಮ್ಮದ್ ಶಮಿ ಅವರನ್ನು ಮತ್ತೊಮ್ಮೆ ರಾಷ್ಟ್ರೀಯ ತಂಡದಿಂದ ಕಡೆಗಣಿಸಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಮುಂಬರುವ ನ್ಯೂಜಿಲೆಂಡ್ ವಿರುದ್ಧದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram