D K Shivakumar: ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ 10 ಲಕ್ಷ ಪರಿಹಾರ
ಭಾರತ್ ಜೋಡೋ ಯಾತ್ರೆ ವೇಳೆ ಹಿರಿಯೂರು ಬಳಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಕಾಂಗ್ರೆಸ್ ಕಾರ್ಯಕರ್ತ ರಮೇಶ್ ಅವರ ನಿವಾಸಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭೇಟಿ ನೀಡಿದ್ದಾರೆ.
ಮೃತರ ಕುಟುಂಬಕ್ಕೆ ಸಂತಾಪ ತಿಳಿಸಿದ ಬಳಿಕ ಅವರ ಪತ್ನಿ ಜಯಮ್ಮ ಪಕ್ಷದ ವತಿಯಿಂದ ಡಿಕೆ ಶಿವಕುಮಾರ್ ಅವರು ರೂ. 10 ಲಕ್ಷ ಚೆಕ್ ಹಸ್ತಾಂತರಿಸಿದ್ದಾರೆ.
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹುತ್ತದಿಂಬ ಗ್ರಾಮಕ್ಕೆ ಶುಕ್ರವಾರ ಆಗಮಿಸಿದ ಅವರು ಗ್ರಾಮಸ್ಥರೊಂದಿಗೆ ಕೆಲಕಾಲ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಶಿವಕುಮಾರ್ ಮಾತನಾಡಿ, ರಮೇಶ್ ಅವರು ಪಕ್ಷದಲ್ಲಿ ಅತ್ಯಂತ ಕ್ರಿಯಾಶೀಲ ಕಾರ್ಯಕರ್ತರಾಗಿದ್ದು, ಅವರ ನಿಧನ ನನಗೆ ಆಘಾತ ತಂದಿದೆ ಎಂದು ತಿಳಿಸಿದರು.
ಡಿಕೆ ಶಿವಕುಮಾರ್ ಅವರೊಂದಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ, ಮಾಜಿ ಸಚಿವ ಕಿಮ್ಮನೆ ರತ್ನಾಕರ, ಮಾಜಿ ಶಾಸಕರಾದ ಮಧುಬಂಗಾರಪ್ಪ, ಬೇಲೂರು ಗೋಪಾಲಕೃಷ್ಣ, ಡಿಸಿಸಿ ಅಧ್ಯಕ್ಷ ಸುಂದರೇಶ್ ಮತ್ತಿತರರು ಇದ್ದರು.
D K Shivakumar: 10 lakh compensation to the family of the deceased Congress worker