ಬೆಡ್ – ವ್ಯಾಕ್ಸಿನ್ ಮಾರಾಟ : ಜನರಿಗೆ ನ್ಯಾಯ ಕೊಡಿಸಲು ಕೋರ್ಟ್ ಮಧ್ಯಪ್ರವೇಶ ಮಾಡಬೇಕು – ಡಿಕೆಶಿ
ಬೆಂಗಳೂರು : 900 – 1200 ರೂಪಾಯಿಗೆ ಬೆಡ್ ಮತ್ತು ವ್ಯಾಕ್ಸಿನ್ ಮಾರಾಟ ಆಗ್ತಿದೆ. ಇದು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸುದ್ದಿ ಆಗಿದೆ. ರಾಜ್ಯದ ಉಚ್ಚ ನ್ಯಾಯಾಲಯ ಕಣ್ಣು ತೆರದು ನೋಡಬೇಕು ಎಂದು ಕೆಪಿಸಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗ್ರಹಿಸಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಈ ಬಗ್ಗೆ ಸೂಕ್ತ ಆದೇಶ ಮಾಡಿ ಸರ್ಕಾರಕ್ಕೆ ತನಿಖೆ ಮಾಡುವಂತೆ ಸೂಚನೆ ನೀಡಬೇಕು.. ಜನರಿಗೆ ನ್ಯಾಯ ಕೊಡಿಸಲು ಕೋರ್ಟ್ ಮಧ್ಯಪ್ರವೇಶ ಮಾಡಬೇಕು ಎಂದು ಆಗ್ರಹಿಸಿದ್ದಾರೆ..
ಅಲ್ಲದೇ 2ನೇ ಅಲೆಗೆ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳದೇ ಲಕ್ಷಾಂತರ ಜನ ಸಾವಿಗೆ ಕಾರಣವಾಗಿದೆ. ಹೀಗಾಗಿ ಮೂರನೇ ಅಲೆ ಮಕ್ಕಳಿಗೆ ಬರಬಹುದು. ನಮ್ಮ ಮಹಿಳಾ ಘಟಕದ ನಾಯಕರು ಮಕ್ಕಳಿಗಾಗಿ ಕಿಟ್ ರೆಡಿ ಮಾಡಿದ್ದಾರೆ ಎಂದಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.