ಬಿಎಸ್ ವೈ ಕಣ್ಣೀರು : ಆ ನೋವು ಕೊಟ್ಟವರಾರು ಎಂದ ಡಿಕೆಶಿ
ಬೆಂಗಳೂರು : ರಾಜೀನಾಮೆ ಘೋಷಣೆ ವೇಳೆ ಬಿ.ಎಸ್.ಯಡಿಯೂರಪ್ಪ ಕಣ್ಣೀರಾಕಿದ್ದು, ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಇದು ಕೇವಲ ಒಬ್ಬ ವ್ಯಕ್ತಿಯ ಕಣ್ಣೀರಲ್ಲ. ರಾಜ್ಯವನ್ನು ಪ್ರತಿನಿಧಿಸುವ ಮುಖ್ಯಮಂತ್ರಿಯ ಕಣ್ಣೀರಾಗಿತ್ತು. ಇದರ ಹಿಂದಿನ ನೋವೇನು? ಆ ನೋವು ಕೊಟ್ಟವರಾರು? ಎಂಬುದನ್ನು ರಾಜ್ಯದ ಜನರಿಗೆ ತಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಯಡಿಯೂರಪ್ಪ ರಾಜೀನಾಮೆ ಬಗ್ಗೆ ಸದಾಶಿವನಗರದಲ್ಲಿ ಪ್ರತಿಕ್ರಿಯೆ ನೀಡಿದ ಡಿ.ಕೆ.ಶಿವಕುಮಾರ್, ಇಂದು ರಾಜೀನಾಮೆ ವಿಚಾರ ಪ್ರಸ್ತಾಪಿಸಿ ಬಿ.ಎಸ್ ಯಡಿಯೂರಪ್ಪನವರು ಕಣ್ಣೀರಿಟ್ಟಿದ್ದು, ಇದು ಕೇವಲ ಒಬ್ಬ ವ್ಯಕ್ತಿಯ ಕಣ್ಣೀರಲ್ಲ. ಯಡಿಯೂರಪ್ಪ ಅವರ ರಾಜೀನಾಮೆ ಹಿಂದೆ ಸಂತೋಷ ಕಾಣುತ್ತಿಲ್ಲ. ಬದಲಿಗೆ ಅವರ ನಿರ್ಧಾರದಲ್ಲಿ ನೋವು ಕಾಣುತ್ತಿದೆ. ಆ ನೋವು ಏನು..? ಆ ನೋವು ಕೊಟ್ಟವರು ಯಾರು..? ಎಂದು ಪ್ರಶ್ನಿಸಿದರು.
ಇನ್ನು ಮೊದಲು ಯಡಿಯೂರಪ್ಪ ತಮ್ಮ ನೋವಿನ ಬಗ್ಗೆ ಜನರಿಗೆ ತಿಳಿಸಬೇಕು. ಎರಡು ವರ್ಷಗಳಲ್ಲಿ ಜನರು ಕೋವಿಡ್ ಸಮಸ್ಯೆಗೆ ತುತ್ತಾಗಿದ್ದರಿಂದ ನೋವಾಯ್ತಾ? ಪಕ್ಷದ ಶಾಸಕರನ್ನು ಹೈಕಮಾಂಡ್ ನಿಯಂತ್ರಣ ಮಾಡಲಿಲ್ಲ ಎಂದು ನೋವಾಯ್ತಾ? ಎಂಬುದು ಜನರಿಗೆ ಗೊತ್ತಾಗಬೇಕು ಎಂದು ಒತ್ತಾಯಿಸಿದ್ದಾರೆ.