ಡಿಕೆಶಿ ಹುಟ್ಟುಹಬ್ಬ – ಋಷ್ಯಶೃಂಗೇಶ್ವರನಿಗೆ ವಿಶೇಷ ಪೂಜೆ – ಆನ್ ಲೈನ್ ಮೂಲಕ ದೇವರ ದರ್ಶನ
ಚಿಕ್ಕಮಗಳೂರು : ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಹುಟ್ಟುಹಬ್ಬದ ಹಿನ್ನೆಲೆ ಕರ್ನಾಟಕ ಕಿಸಾನ್ ಕಾಂಗ್ರೆಸ್ ವತಿಯಿಂದ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ಕೋವಿಡ್ ಆತಂಕದ ನಡುವೆ ಡಿಕೆಶಿ ಅತ್ಯಂತ ಸರಳವಾಗಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ.
ಶೃಂಗೇರಿ ತಾಲೂಕಿನ ಕಿಗ್ಗಾದಲ್ಲಿರುವ ಡಿಕೆಶಿ ಅವರ ಇಷ್ಟದೈವ ಋಷ್ಯಶೃಂಗೇಶ್ವರನಿಗೆ ವಿಶೇಷ ಪೂಜೆ ಸರ್ಮಿಪಣೆ ಮಾಡಲಾಗಿದ್ದು, ಆನ್ಲೈನ್ ಮೂಲಕವೇ ಡಿಕೆಶಿ ಋಷ್ಯಶೃಂಗೇಶ್ವರನ ದರ್ಶನ ಪಡೆಸುಕೊಂಡಿದ್ಧಾರೆ. ಸಚಿನ್ ಮೀಗಾ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಿದ್ದು, ಕರ್ನಾಟಕ ಕಿಸಾನ್ ಕಾಂಗ್ರೆಸ್ ವತಿಯಿಂದ 101 ತೆಂಗಿನಕಾಯಿ ಸಮರ್ಪಣೆ ಮಾಡಲಾಗಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.