ಬೆಂಗಳೂರು : ಡಿ.ಕೆ.ಶಿವಕುಮಾರ್ (D.K.Shivakumar ) ಅವರು ತಾವು ಭ್ರಷ್ಟಾಚಾರ ಮಾಡಿದ್ದಾರೋ ಇಲ್ಲವೋ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಲಿ. ತಪ್ಪು ಮಾಡಿದ್ದರೆ ಜನತೆಯ ಮುಂದೆ ತಪ್ಪು ಮಾಡಿದ್ದೇನೆ ಎಂದು ಹೇಳಲಿ. ಅದನ್ನು ಬಿಟ್ಟು ತತ್ವ ಜ್ಞಾನಿಯಾಗಿ ಮಾತನಾಡುವುದು ಬೇಡ ಎಂದು ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ (D.K.Shivakumar) ಮೇಲೆ ನಡೆದಿರುವ ಸಿಬಿಐ ದಾಳಿ ಉಪಚುನಾವಣೆ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ.
ಸಿಬಿಐ ದಾಳಿಗೂ ಉಪಚುನಾವಣೆಗೂ ಯಾವುದೇ ರೀತಿಯ ಸಂಬಂಧವಿಲ್ಲ. ಸಿಬಿಐ ದಾಳಿ ಉಪಚುನಾವಣೆ ಮೇಲೆ ಎಳ್ಳಷ್ಟು ಪರಿಣಾಮ ಬೀರುವುದಿಲ್ಲ ಎಂದರು.
ಇದನ್ನೂ ಓದಿ : ಆರ್.ಆರ್.ನಗರ ಬೈ ಎಲೆಕ್ಷನ್ ; ಫೈನಲ್ ಆಗದ ಬಿಜೆಪಿ ಅಭ್ಯರ್ಥಿ
ಇದೇ ವೇಳೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಮಾತನಾಡಿದ ಸಿ.ಟಿ.ರವಿ, ಪಕ್ಷದ ವರಿಷ್ಠರು ಅಭ್ಯರ್ಥಿಗಳನ್ನು ಯಾವುದೇ ಸಂದರ್ಭದಲ್ಲಾದರೂ ಘೋಷಣೆ ಮಾಡಬಹುದು.
ಯಾರೇ ಅಭ್ಯರ್ಥಿಗಳಾದರೂ ಒಗ್ಗಟ್ಟಿನಿಂದ ಶ್ರಮಿಸಿ ಗೆಲುವಿಗೆ ಸಹಕರಿಸುತ್ತೇವೆ. ನಮಗೆ ಎಲ್ಲಾ ಚುನಾವಣೆಯೂ ಪ್ರತಿಷ್ಟೆಯಾಗಿದೆ. ಬೇರೆ ಪಕ್ಷಗಳ ಚಟುವಟಿಕೆಗಳ ಬಗ್ಗೆ ಗಮನಿಹರಿಸುವುದಿಲ್ಲ.
ಯಾರಿಗೆ ಟಿಕೆಟ್ ನೀಡಬೇಕು ಎಂಬುದನ್ನು ವರಿಷ್ಠರು ತೀರ್ಮಾನಿಸುತ್ತಾರೆ. ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು. ಪಕ್ಷಕಿಂತ ವ್ಯಕ್ತಿ ದೊಡ್ಡವರಲ್ಲ ಎಂಬುದು ನಮ್ಮ ಸಿದ್ದಾಂತ ಎಂದು ಹೇಳಿದರು.
ಇದನ್ನೂ ಓದಿ : ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್ : ಅ.25ಕ್ಕೆ `ಕೈ’ ಹಿಡಿಯಲಿದ್ದಾರೆ ಶರತ್
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel