D K Shivakumar | ಒಕ್ಕಲಿಗರು ನನಗೆ ಬೆಂಬಲವಾಗಿ ನಿಲ್ಲಬೇಕು
ಮೈಸೂರು: ಒಕ್ಕಲಿಗರು ನನಗೆ ಬೆಂಬಲವಾಗಿ ನಿಲ್ಲಬೇಕು. ನನಗೆ ಎಲ್ಲ ಅವಕಾಶಗಳಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುಂದಿನ ಸಿಎಂ ನಾನೇ ಎಂದು ಪರೋಕ್ಷವಾಗಿ ಹೇಳಿದ್ದಾರೆ.
ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಅಭ್ಯರ್ಥಿ ಯಾರು ಎಂಬ ಪ್ರಶ್ನೆ ಶುರುವಾಗಿದೆ. ಈ ರೇಸ್ ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ.
ಸಿದ್ದರಾಮಯ್ಯ ಮುಂದಿನ ಸಿಎಂ ನಾನೇ ಎಂಬಂತೆ ಹಾಗಾಗ ಮಾತುಗಳನ್ನಾಡುತ್ತಿದ್ದಾರೆ.
ಇದೀಗ ಡಿ.ಕೆ.ಶಿವಕುಮಾರ್ ನಾನು ಕೂಡ ಸಿಎಂ ಆಗ್ತೀನಿ ಎಂಬಂತೆ ಹೇಳಿಕೆಗಳನ್ನು ನೀಡಿದ್ದಾರೆ.
ಎಸ್.ಎಂ.ಕೃಷ್ಣ ಒಕ್ಕಲಿಗ ಸಮುದಾಯದವರು. ಕೆಪಿಸಿಸಿ ಅಧ್ಯಕ್ಷರಾಗಿ ಬಳಿಕ ಸಿಎಂ ಆದರು.
ನಾನೂ ಒಕ್ಕಲಿಗ ಸಮುದಾಯದವನು. ಕೆಪಿಸಿಸಿ ಅಧ್ಯಕ್ಷ ಆಗಿದ್ದೇನೆ. ನಾನು ಸನ್ಯಾಸಿ ಅಲ್ಲ.

ಮುಖ್ಯಮಂತ್ರಿ ಯಾರಾಗಬೇಕು ಅಂತ ಪಕ್ಷ ತೀರ್ಮಾನ ಕೈಗೊಳ್ಳುತ್ತೆ. ಮುಂದೆ ಏನಾಗುತ್ತೋ ನೋಡೋಣ ಎಂದು ಹೇಳಿದ್ದಾರೆ.
ಪ್ರತಿಪಕ್ಷ ವೀಕಾಗಿದ್ರೆ ಮಂತ್ರಿಗಳು ರಾಜೀನಾಮೆ ಕೊಡುತ್ತಿರಲಿಲ್ಲ.
ನಾವು ಹಲವು ವಿಚಾರ ತೆಗೆದುಕೊಂಡು ಹೋರಾಟ ಮಾಡಿದ್ದೇವೆ.
ಸಿದ್ದರಾಮಯ್ಯ ಸರ್ಕಾರ ಇದ್ದಾಗ ನಾವು ಕೊಟ್ಟ ಬಹುತೇಕ ಭರವಸೆ ಈಡೇರಿಸಿದ್ದೇವೆ.
ಆದರೆ ಬಿಜೆಪಿ ಶೇ.40 ಕೂಡ ಮಾಡಿಲ್ಲ. ಅವರು ಏನು ಸಾಧನೆ ಮಾಡಿದ್ದಾರೆ ತಿಳಿಸಲಿ.
ಕಾಂಗ್ರೆಸ್‌ನಲ್ಲಿ ಯಾವುದೇ ಬಣ ಇಲ್ಲ. ಇರುವುದು ಕಾಂಗ್ರೆಸ್ ಬಣ ಒಂದೇ.
ನನಗೆ ಪಕ್ಷ, ಧ್ವಜ ಮುಖ್ಯ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.