ADVERTISEMENT
Monday, July 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಡಿ.ಕೆ. ಶಿವಕುಮಾರ್ ಟೆಂಡರ್ ಸಿಎಂ, ರಾಜ್ಯದಲ್ಲಿ ನಡೆಯುತ್ತಿರುವುದು 60 ಪರ್ಸೆಂಟ್ ಸರ್ಕಾರ: ಆರ್ ಅಶೋಕ್ ಗಂಭೀರ ಆರೋಪ

Shwetha by Shwetha
July 13, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಮಂಡ್ಯ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಮರ ಸಾರಿರುವ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಗಂಭೀರ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದ್ದಾರೆ.

ಡಿ.ಕೆ. ಶಿವಕುಮಾರ್ ಅಂದ್ರೆ ಟೆಂಡರ್ ಸಿಎಂ

Related posts

ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಮೊದಲು ಸಭ್ಯತೆ ಕಲಿಯಿರಿ – ರಾಹುಲ್ ಗಾಂಧಿ ನಾಪತ್ತೆ ಡಿಕೆಶಿ ತಲಾಶ್ : ಡಿಕೆಶಿ ಮತ್ತು ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ವಾಗ್ದಾಳಿ

ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಮೊದಲು ಸಭ್ಯತೆ ಕಲಿಯಿರಿ – ರಾಹುಲ್ ಗಾಂಧಿ ನಾಪತ್ತೆ ಡಿಕೆಶಿ ತಲಾಶ್ : ಡಿಕೆಶಿ ಮತ್ತು ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ವಾಗ್ದಾಳಿ

July 13, 2026
ದೊಡ್ಡವರಿಗೆ ಬೈದ್ರೆ ಪುಕ್ಸಟ್ಟೆ ಪ್ರಚಾರ ಸಿಗುತ್ತೆ: ವಿನಾಶಕಾಲೇ ವಿಪರೀತ ಬುದ್ಧಿ, ಮಗನ ನಡವಳಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಡ್ಯಾಮೇಜ್-ಮಗನಿಗೆ ಮಲ್ಲಿಕಾರ್ಜುನ ಖರ್ಗೆಯವರು ಬುದ್ಧಿ ಹೇಳಲಿ ಎಂದ ಕನ್ಹೇರಿ ಶ್ರೀ

ದೊಡ್ಡವರಿಗೆ ಬೈದ್ರೆ ಪುಕ್ಸಟ್ಟೆ ಪ್ರಚಾರ ಸಿಗುತ್ತೆ: ವಿನಾಶಕಾಲೇ ವಿಪರೀತ ಬುದ್ಧಿ, ಮಗನ ನಡವಳಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಡ್ಯಾಮೇಜ್-ಮಗನಿಗೆ ಮಲ್ಲಿಕಾರ್ಜುನ ಖರ್ಗೆಯವರು ಬುದ್ಧಿ ಹೇಳಲಿ ಎಂದ ಕನ್ಹೇರಿ ಶ್ರೀ

July 13, 2026

ನಗರದ ಜೆ.ಕೆ. ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಆರ್ ಅಶೋಕ್, ಡಿ.ಕೆ. ಶಿವಕುಮಾರ್ ಅವರನ್ನು ಟೆಂಡರ್ ಸಿಎಂ ಎಂದು ವ್ಯಂಗ್ಯವಾಡಿದರು. ಸಿದ್ದರಾಮಯ್ಯ ಅವರು ಮುಡಾ ಹಗರಣದಲ್ಲಿ ಸೈಟ್ ಮಾಡಿಕೊಳ್ಳುವುದನ್ನೇ ಸಾಧನೆ ಎಂದು ಭಾವಿಸಿದ್ದರೆ, ಡಿ.ಕೆ. ಶಿವಕುಮಾರ್ ಅವರು ಅಧಿಕಾರಕ್ಕೆ ಬಂದಾಗಿನಿಂದ ಕೇವಲ ಟೆಂಡರ್ ಪ್ರಕ್ರಿಯೆಗಳಲ್ಲೇ ಮುಳುಗಿದ್ದಾರೆ. ಸಿದ್ದರಾಮಯ್ಯ ಅವರ ನಂತರ ಟೆಂಡರ್ ಪ್ರಭಾವದ ಮೂಲಕವೇ ಅವರು ಈ ಸ್ಥಾನಕ್ಕೆ ಬಂದಿದ್ದಾರೆ ಎಂದು ಟೀಕಿಸಿದರು.

ಬೆಂಗಳೂರಿನ ಕಸ ವಿಲೇವಾರಿ, 40 ಸಾವಿರ ಕೋಟಿ ರೂಪಾಯಿ ವೆಚ್ಚದ ಟನಲ್ ರಸ್ತೆ ಯೋಜನೆ ಮತ್ತು ಬಿಡದಿ ಟೌನ್‌ಶಿಪ್ ಸೇರಿದಂತೆ ಮುಂದಿನ 30 ರಿಂದ 40 ವರ್ಷಗಳಲ್ಲಿ ಮಾಡಬಹುದಾದ ಎಲ್ಲಾ ಕೆಲಸಗಳಿಗೂ ಈಗಲೇ ಟೆಂಡರ್ ಕರೆದಿದ್ದಾರೆ. ರಾಹುಲ್ ಗಾಂಧಿ ಅವರು ಹಾಕಿದ ಟೆಂಡರ್ ಅನ್ನು ಡಿ.ಕೆ. ಶಿವಕುಮಾರ್ ಖರೀದಿ ಮಾಡುತ್ತಿದ್ದಾರೆ. ಈ ಹಿಂದೆ 40 ಪರ್ಸೆಂಟ್ ಸರ್ಕಾರ ಎಂದು ಆರೋಪಿಸುತ್ತಿದ್ದ ಕಾಂಗ್ರೆಸ್ ಈಗ 60 ಪರ್ಸೆಂಟ್ ಸರ್ಕಾರ ನಡೆಸುತ್ತಿದೆ ಎಂದು ಅಶೋಕ್ ಕಿಡಿಕಾರಿದರು.

ಅಕ್ರಮ ವಲಸಿಗರಿಗೆ ಮಣೆ: ಪಿಆರ್‌ಸಿ ಆದೇಶಕ್ಕೆ ಆಕ್ರೋಶ

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಶಾಶ್ವತ ನಿವಾಸ ಪ್ರಮಾಣಪತ್ರ (ಪಿಆರ್‌ಸಿ) ಆದೇಶದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಪೌರತ್ವ ಅಥವಾ ಶಾಶ್ವತ ನಿವಾಸದ ಬಗ್ಗೆ ತೀರ್ಮಾನಿಸುವ ಹಕ್ಕು ಕೇಂದ್ರ ಸರ್ಕಾರಕ್ಕೆ ಮಾತ್ರ ಇದೆ. ರಾಜ್ಯ ಸರ್ಕಾರಕ್ಕೆ ಈ ಅಧಿಕಾರ ಕೊಟ್ಟವರು ಯಾರು? ಬಾಂಗ್ಲಾದೇಶದ ಅಕ್ರಮ ವಲಸಿಗರಿಗೆ ಮತದಾನದ ಹಕ್ಕು ಕೊಡಿಸಲು ಈ ಸಂಚು ರೂಪಿಸಲಾಗಿದೆ. ರಾಜ್ಯದ ಭದ್ರತೆಗೆ ಧಕ್ಕೆ ತರುವ ಈ ಸಂವಿಧಾನ ವಿರೋಧಿ ಆದೇಶವನ್ನು ತಕ್ಷಣವೇ ರದ್ದು ಮಾಡಬೇಕು ಎಂದು ಒತ್ತಾಯಿಸಿದರು.

ತೋರಿಕೆಯ ಹಿಂದುತ್ವ ಮತ್ತು ಅಲ್ಪಸಂಖ್ಯಾತರ ಓಲೈಕೆ

ಡಿ.ಕೆ. ಶಿವಕುಮಾರ್ ಅವರ ಭಕ್ತಿ ಕೇವಲ ಪ್ರದರ್ಶನಕ್ಕಾಗಿ ಮಾತ್ರ. ಬೆಳಗ್ಗೆ ಎದ್ದ ಕೂಡಲೇ ದೇವಸ್ಥಾನಕ್ಕೆ ಹೋಗುವುದು, ವಿಭೂತಿ ಧರಿಸುವುದು ಅವರ ತೋರಿಕೆಯ ಹಿಂದುತ್ವವಾಗಿದೆ. ಅತಿಯಾದ ಅಲ್ಪಸಂಖ್ಯಾತರ ಓಲೈಕೆಯಿಂದಾಗಿ ರಾಜ್ಯದಲ್ಲಿ ಹಿಂದೂಗಳ ಮಾರಣಹೋಮ ನಡೆಯುತ್ತಿದೆ. ಅಕ್ರಮ ವಲಸಿಗರಿಂದ ಏನಾದರೂ ಅನಾಹುತ ಅಥವಾ ಬಾಂಬ್ ಸ್ಫೋಟದಂತಹ ಘಟನೆಗಳು ನಡೆದರೆ ಅದಕ್ಕೆ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ ಎಂದು ಎಚ್ಚರಿಸಿದರು.

ಮೋದಿ ಅವರ ಜಾತಿ ನೋಡಿ ಕಾಂಗ್ರೆಸ್ ವಿರೋಧಿಸುತ್ತಿದೆ

ಪ್ರಧಾನಿ ನರೇಂದ್ರ ಮೋದಿ ಅವರು ಅತ್ಯಂತ ಹಿಂದುಳಿದ ಸಮುದಾಯದಿಂದ ಬಂದು ದೇಶದ ನಾಯಕರಾಗಿರುವುದನ್ನು ಕಾಂಗ್ರೆಸ್‌ಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅವರ ಜಾತಿಯ ಕಾರಣಕ್ಕಾಗಿಯೇ ಕಾಂಗ್ರೆಸ್ ನಾಯಕರು ಮೋದಿ ಅವರನ್ನು ವಿರೋಧಿಸುತ್ತಿದ್ದಾರೆ. ರಾಜ್ಯದಲ್ಲಿರುವ ನಾಲಾಯಕ್ ಕಾಂಗ್ರೆಸ್ ಸರ್ಕಾರಕ್ಕೆ ಅಹಿಂದ ವರ್ಗಗಳ ರಕ್ಷಣೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಅಶೋಕ್ ವಾಗ್ದಾಳಿ ನಡೆಸಿದರು.

ShareTweetSendShare
Join us on:

Related Posts

ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಮೊದಲು ಸಭ್ಯತೆ ಕಲಿಯಿರಿ – ರಾಹುಲ್ ಗಾಂಧಿ ನಾಪತ್ತೆ ಡಿಕೆಶಿ ತಲಾಶ್ : ಡಿಕೆಶಿ ಮತ್ತು ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ವಾಗ್ದಾಳಿ

ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಮೊದಲು ಸಭ್ಯತೆ ಕಲಿಯಿರಿ – ರಾಹುಲ್ ಗಾಂಧಿ ನಾಪತ್ತೆ ಡಿಕೆಶಿ ತಲಾಶ್ : ಡಿಕೆಶಿ ಮತ್ತು ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ವಾಗ್ದಾಳಿ

by Shwetha
July 13, 2026
0

ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ತೀವ್ರ ವಾಗ್ದಾಳಿ ನಡೆಸಿದರು. ರಾಹುಲ್ ಗಾಂಧಿ ಅವರು...

ದೊಡ್ಡವರಿಗೆ ಬೈದ್ರೆ ಪುಕ್ಸಟ್ಟೆ ಪ್ರಚಾರ ಸಿಗುತ್ತೆ: ವಿನಾಶಕಾಲೇ ವಿಪರೀತ ಬುದ್ಧಿ, ಮಗನ ನಡವಳಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಡ್ಯಾಮೇಜ್-ಮಗನಿಗೆ ಮಲ್ಲಿಕಾರ್ಜುನ ಖರ್ಗೆಯವರು ಬುದ್ಧಿ ಹೇಳಲಿ ಎಂದ ಕನ್ಹೇರಿ ಶ್ರೀ

ದೊಡ್ಡವರಿಗೆ ಬೈದ್ರೆ ಪುಕ್ಸಟ್ಟೆ ಪ್ರಚಾರ ಸಿಗುತ್ತೆ: ವಿನಾಶಕಾಲೇ ವಿಪರೀತ ಬುದ್ಧಿ, ಮಗನ ನಡವಳಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಡ್ಯಾಮೇಜ್-ಮಗನಿಗೆ ಮಲ್ಲಿಕಾರ್ಜುನ ಖರ್ಗೆಯವರು ಬುದ್ಧಿ ಹೇಳಲಿ ಎಂದ ಕನ್ಹೇರಿ ಶ್ರೀ

by Shwetha
July 13, 2026
0

ಆರ್‌ಎಸ್‌ಎಸ್‌ ಎಂಬುದು ದೇಶದಲ್ಲಿ ರಾಷ್ಟ್ರಭಕ್ತಿ ನಿರ್ಮಾಣ ಮಾಡುವ ಶಕ್ತಿಯುತ ಸಂಘಟನೆಯಾಗಿದ್ದು, ಕೇವಲ ಪ್ರಚಾರಕ್ಕಾಗಿ ಅದರ ವಿರುದ್ಧ ಮಾತನಾಡುವುದು ಸರಿಯಲ್ಲ ಎಂದು ಕನ್ಹೇರಿ ಶ್ರೀಗಳು ಗೃಹ ಸಚಿವ ಪ್ರಿಯಾಂಕ್...

ಕ್ಯಾಪ್ಟನ್ ಅಲ್ಲ ನಾನು ಲೀಡರ್: ಮೌನವಾಗಿಯೇ ಗುದ್ದು ನೀಡಿದ ಮಿಸ್ಟರ್ 360- ಸೂರ್ಯನ ಹೊಸ ಟಿ ಶರ್ಟ್ ಹಿಂದಿನ ರಹಸ್ಯವೇನು?

ಕ್ಯಾಪ್ಟನ್ ಅಲ್ಲ ನಾನು ಲೀಡರ್: ಮೌನವಾಗಿಯೇ ಗುದ್ದು ನೀಡಿದ ಮಿಸ್ಟರ್ 360- ಸೂರ್ಯನ ಹೊಸ ಟಿ ಶರ್ಟ್ ಹಿಂದಿನ ರಹಸ್ಯವೇನು?

by Shwetha
July 13, 2026
0

ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಅವರ ಇತ್ತೀಚಿನ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿದೆ. ಸೂರ್ಯ ಅವರ ಪತ್ನಿ ದೇವಿಶಾ ಶೆಟ್ಟಿ...

ನೆಹರೂ ಇಂದಿರಾ ಗಾಂಧಿಗೇ ಅಲುಗಾಡಿಸಲು ಆಗದ ಆರ್‌ಎಸ್‌ಎಸ್‌ ಬಗ್ಗೆ ಪ್ರಿಯಾಂಕ್‌ ಬೊಗಳೆ ಬಿಡುತ್ತಿದ್ದಾರಾ?:ಸುದ್ದಿಯಾಗುವ ಹುಚ್ಚು ಬಿಟ್ಟು ಮೊದಲು ತಲೆ ಪರೀಕ್ಷೆ ಮಾಡಿಸಿಕೊಳ್ಳಿ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೆಂಡಕಾರಿದ ಜನಾರ್ದನ ರೆಡ್ಡಿ!

ನೆಹರೂ ಇಂದಿರಾ ಗಾಂಧಿಗೇ ಅಲುಗಾಡಿಸಲು ಆಗದ ಆರ್‌ಎಸ್‌ಎಸ್‌ ಬಗ್ಗೆ ಪ್ರಿಯಾಂಕ್‌ ಬೊಗಳೆ ಬಿಡುತ್ತಿದ್ದಾರಾ?:ಸುದ್ದಿಯಾಗುವ ಹುಚ್ಚು ಬಿಟ್ಟು ಮೊದಲು ತಲೆ ಪರೀಕ್ಷೆ ಮಾಡಿಸಿಕೊಳ್ಳಿ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೆಂಡಕಾರಿದ ಜನಾರ್ದನ ರೆಡ್ಡಿ!

by Shwetha
July 13, 2026
0

ಕೊಪ್ಪಳ: ರಾಜ್ಯ ರಾಜಕಾರಣದಲ್ಲಿ ಸದಾ ಕಾಲ ಸುದ್ದಿಯಲ್ಲಿರಬೇಕು ಎನ್ನುವ ಹಪಹಪಿಯಿಂದ ಸಚಿವ ಪ್ರಿಯಾಂಕ್ ಖರ್ಗೆ ಅವರು ಬೇಜವಾಬ್ದಾರಿಯುತವಾಗಿ ಮಾತನಾಡುತ್ತಿದ್ದಾರೆ. ಅವರೊಬ್ಬ ಹುಚ್ಚನಂತೆ ವರ್ತಿಸುತ್ತಿದ್ದಾರೆ ಎಂದು ಗಂಗಾವತಿ ಶಾಸಕ...

ದಿನ ಭವಿಷ್ಯ (07-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (13-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 13, 2026
0

ದಿನ ಭವಿಷ್ಯ 13-07-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ದೊರೆಯಲಿದ್ದು, ಮೇಲಧಿಕಾರಿಗಳೊಂದಿಗೆ ಉತ್ತಮ ಬಾಂಧವ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram